ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2020

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2020 | ಕರ್ನಾಟಕ ಉದ್ಯೋಗ ಮಾಹಿತಿಗೆ ಸ್ವಾಗತ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಗತ್ಯವಿರುವ (ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ) ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ಆಯ್ಕೆ ಪ್ರಕ್ರಿಯೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಅಂಗನವಾಡಿ ಕಾರ್ಯಕರ್ತೆಯರು
ಅಂಗನವಾಡಿ ಸಹಾಯಕಿಯರು

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 455 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಅಂಗನವಾಡಿ ಕಾರ್ಯಕರ್ತೆ (ಬೆಳಗಾವಿ) – 75 ಹುದ್ದೆಗಳು
ಅಂಗನವಾಡಿ ಸಹಾಯಕಿ (ಬೆಳಗಾವಿ) – 332 ಹುದ್ದೆಗಳು
ಅಂಗನವಾಡಿ ಕಾರ್ಯಕರ್ತೆ (ರಾಯಚೂರು) – 08 ಹುದ್ದೆಗಳು
ಅಂಗನವಾಡಿ ಸಹಾಯಕಿ (ರಾಯಚೂರು) – 40 ಹುದ್ದೆಗಳು

ಕರ್ತವ್ಯ ಸ್ಥಳ :
ಬೆಳಗಾವಿ ಜಿಲ್ಲೆ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯುತ್ತಿದೆ.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಕಂಡಂತೆ ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅಂಗನವಾಡಿ ಕಾರ್ಯಕರ್ತೆಯರು :
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ ಗಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆ ಹೊಂದಿದ್ದರೂ ಎಸ್.ಎಸ್.ಎಲ್.ಸಿ ಅಂಕಪಟ್ಟಿಯನ್ನು ಲಗತ್ತಿಸಬೇಕು.
ಅಂಗನವಾಡಿ ಸಹಾಯಕಿಯರು :
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಗರಿಷ್ಠ 9ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ 2020

ವಯೋಮಾನ :
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಾನ ಹೊಂದಿರಬೇಕು.

ವಯೋಮಾನ ಸಡಿಲಿಕೆ :
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಅಂಗವಿಕಲ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷ ವಯೋಮಾನ ಸಡಿಲಿಕೆ ಇರುತ್ತದೆ.

ನಿಗದಿಪಡಿಸಲಾದ ಮಾಸಿಕ ವೇತನ :
ಇಲಾಖೆಯ ಮಾನದಂಡಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :
ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಢೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : ಸೆಪ್ಟೆಂಬರ್ 05, 2020
ಅರ್ಜಿ ಸಲ್ಲಿಕೆ ಮುಕ್ತಾಯದ ದಿನಾಂಕ : ಅಕ್ಟೋಬರ್ 05, 2020

ಅರ್ಜಿ ಸಲ್ಲಿಕೆಯ ವಿಧಾನ :
• ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು.
• ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್‌ಲೈನ್‌ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿ ಸಲ್ಲಿಕೆಗೆ ಅವಶ್ಯವಿರುವ ದಾಖಲೆಗಳು :
• ಅಭ್ಯರ್ಥಿಗಳ ಜನನ ಪ್ರಮಾಣ ಪತ್ರ ಅಥವಾ ಜನ್ಮದಿನಾಂಕವಿರುವ ಎಸ್.ಎಸ್.ಎಲ್.ಸಿ ಅಂಕಪಟ್ಟಿ
• ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆಯ ಅಂಕಪಟ್ಟಿ.
• ತಹಶೀಲ್ದಾರರು ಅಥವಾ ಉಪ ತಹಶೀಲ್ದಾರರಿಂದ ಪಡೆದ ಒಂದು ವರ್ಷದ ಒಳಗಿನ ವಾಸಸ್ಥಳ ದೃಢೀಕರಣ ಪತ್ರ.
• ಅಭ್ಯರ್ಥಿಗಳು ಹುದ್ದೆಗೆ ಮೀಸಲಾತಿ ಬಯಸಿದ್ದಲ್ಲಿ ಜಾತಿ ಪ್ರಮಾಣ ಪತ್ರ.
ಹುದ್ದೆಗೆ ಸಂಬಂಧಿಸಿದಂತೆ ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.

ಇತರೆ ಮಾಹಿತಿ :
ಸ್ಥಳೀಯ ನಿವಾಸಿಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಿದ್ದು ಹುದ್ದೆ ಖಾಲಿ ಇರುವ ಊರಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ಸೂಚಿಸಲಾಗಿದೆ.

ಅಧಿಸೂಚನೆ (ಬೆಳಗಾವಿ ಜಿಲ್ಲೆ) : Click Here
ಅಧಿಸೂಚನೆ (ರಾಯಚೂರು ಜಿಲ್ಲೆ) : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.