ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಅಂಗನವಾಡಿ ಕಾರ್ಯಕರ್ತೆಯರು
ಅಂಗನವಾಡಿ ಸಹಾಯಕಿಯರು

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 485 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
(ಕೋಲಾರ) ಅಂಗನವಾಡಿ ಕಾರ್ಯಕರ್ತೆ – 50 ಹುದ್ದೆಗಳು
(ಕೋಲಾರ) ಅಂಗನವಾಡಿ ಸಹಾಯಕಿ – 171 ಹುದ್ದೆಗಳು
(ಬೆಂಗಳೂರು ನಗರ) ಅಂಗನವಾಡಿ ಕಾರ್ಯಕರ್ತೆ – 55 ಹುದ್ದೆಗಳು
(ಬೆಂಗಳೂರು ನಗರ) ಅಂಗನವಾಡಿ ಸಹಾಯಕಿ – 209 ಹುದ್ದೆಗಳು

ಕರ್ತವ್ಯ ಸ್ಥಳ :
ಕೋಲಾರ ಜಿಲ್ಲೆ , ಬೆಂಗಳೂರು ನಗರ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಕಂಡಂತೆ ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅಂಗನವಾಡಿ ಕಾರ್ಯಕರ್ತೆಯರು :
ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ತೇರ್ಗಡೆಯಾಗಿರಬೇಕು. ಎಸ್.ಎಸ್.ಎಲ್.ಸಿ ಗಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆ ಆಯ್ಕೆಗೆ ಪರಿಗಣಿಸುವುದಿಲ್ಲ.

ಅಂಗನವಾಡಿ ಸಹಾಯಕಿಯರು :
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆ, ಹಾಗೂ ಗರಿಷ್ಠ 9ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.

ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ :
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಾನ ಹೊಂದಿರಬೇಕು.

ನಿಗದಿಪಡಿಸಲಾದ ಗೌರವಧನ :
ಕಾರ್ಯಕರ್ತೆ ಹುದ್ದೆಗೆ ರೂ. 10,000, ಸಹಾಯಕಿ ಹುದ್ದೆಗೆ ರೂ. 5,000 ಗೌರವಧನ ನೀಡಲಾಗುವುದು


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್‌ಸೈಟ್ www.anganwadirecruitment.kar.nic.in ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿ ಸಲ್ಲಿಕೆಗೆ ಅವಶ್ಯವಿರುವ ದಾಖಲೆಗಳು :
• ಅಭ್ಯರ್ಥಿಗಳ ಜನನ ಪ್ರಮಾಣ ಪತ್ರ ಅಥವಾ ಜನ್ಮದಿನಾಂಕವಿರುವ ಎಸ್.ಎಸ್.ಎಲ್.ಸಿ ಅಂಕಪಟ್ಟಿ
• ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆಯ ಅಂಕಪಟ್ಟಿ.
• ತಹಶೀಲ್ದಾರರು ಅಥವಾ ಉಪ ತಹಶೀಲ್ದಾರರಿಂದ ಪಡೆದ ಒಂದು ವರ್ಷದ ಒಳಗಿನ ವಾಸಸ್ಥಳ ದೃಢೀಕರಣ ಪತ್ರ.
• ಅಭ್ಯರ್ಥಿಗಳು ಹುದ್ದೆಗೆ ಮೀಸಲಾತಿ ಬಯಸಿದ್ದಲ್ಲಿ ಜಾತಿ ಪ್ರಮಾಣ ಪತ್ರ.
ಹುದ್ದೆಗೆ ಸಂಬಂಧಿಸಿದಂತೆ ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಜಿಲ್ಲೆಪ್ರಾರಂಭದ ದಿನಾಂಕಕೊನೆಯ ದಿನಾಂಕ
ಕೋಲಾರ13/11/202019/12/2020
ಬೆಂಗಳೂರು ನಗರ21/11/202021/12/2020
ಉತ್ತರ ಕನ್ನಡ21/11/202024/12/2020

(ಕೋಲಾರ ಜಿಲ್ಲೆ) ಅಧಿಸೂಚನೆ : Click Here
(ಬೆಂಗಳೂರು ನಗರ) ಅಧಿಸೂಚನೆ : Click Here
(ಉತ್ತರ ಕನ್ನಡ) ಅಧಿಸೂಚನೆ : Click Here

ಇತರೆ ಮಾಹಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ಥಳೀಯ ನಿವಾಸಿಗಳಾಗಿರಬೇಕು

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.