ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಉದ್ಯೋಗಾವಕಾಶ

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಖಾಲಿಯಿರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಆಯ್ಕೆ ವಿಧಾನ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಶೀಘ್ರಲಿಪಿಗಾರರು
ಬೆರಳಚ್ಚುಗಾರರು

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 16 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಶೀಘ್ರಲಿಪಿಗಾರ1330350-58250
ಬೆರಳಚ್ಚುಗಾರ0321400-42000

ವಯೋಮಾನ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ,
ಸಾಮಾನ್ಯ ವರ್ಗ ಗರಿಷ್ಠ 35 ವರ್ಷ,
ಪ.ಜಾತಿ/ಪ.ಪಂ/ಪ್ರ1 ಗರಿಷ್ಠ 40 ವರ್ಷ,
2ಎ,2ಬಿ,3ಎ,3ಬಿ ಗರಿಷ್ಠ 38 ವರ್ಷ ನಿಗದಿಪಡಿಸಲಾಗಿದೆ

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ,
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಹಾಗೂ ಆಂಗ್ಲ ಮತ್ತು ಕನ್ನಡ ಭಾಷೆಯ ಶೀಘ್ರಲಿಪಿ ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ

ಆಯ್ಕೆ ವಿಧಾನ :
ಅಭ್ಯರ್ಥಿಯು ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಪಡೆದ ಶೇಕಡ ಒಟ್ಟು ಅಂಕಗಳ ಮತ್ತು ಸಂದರ್ಶನದಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ. ರಸ್ತೆ ಬೆಂಗಳೂರು ~ 560009

ನಿಗದಿತ ಅರ್ಜಿ ಶುಲ್ಕದ ವಿವರ :
ಎಸ್ಸಿ, ಎಸ್ಟಿ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ. ಇತರೆ ಪ್ರವರ್ಗದ ಅಭ್ಯರ್ಥಿಗಳು ರೂ. 150 ಪಾವತಿಸಬೇಕು

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ರೂ. 150 ಡಿಡಿಯನ್ನು ‘ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ ರಸ್ತೆ ಬೆಂಗಳೂರು’ ಇವರ ಹೆಸರಿಗೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 25, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರುವರಿ 25, 2021

ಅಧಿಸೂಚನೆ (ಶೀಘ್ರಲಿಪಿಗಾರ): Click Here
ಅರ್ಜಿ ನಮೂನೆ : Click Here
ಅಧಿಸೂಚನೆ (ಬೆರಳಚ್ಚುಗಾರ): Click Here
ಅರ್ಜಿ ನಮೂನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook