ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ 2020 | 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಭರ್ತಿ

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ 2020 | ಕರ್ನಾಟಕ ಜಾಬ್ ಇನ್ಫೋಗೆ ಸ್ವಾಗತ | ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಅರಣ್ಯ ಇಲಾಖೆ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ ಅಗತ್ಯವಿರುವ ಗ್ರೂಪ್ ‘ಎ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಪರೀಕ್ಷಾ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ

ಕರ್ತವ್ಯ ಸ್ಥಳ :
ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಹುದ್ದೆಯ ವಿಧ :
ಪೂರ್ಣ ಅವಧಿಗಾಗಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಕರ್ನಾಟಕ ಲೋಕಸೇವಾ ಆಯೋಗ ಒಟ್ಟು 16 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಬಿ.ಎಸ್ಸಿ (ಅರಣ್ಯ ಶಾಸ್ತ್ರ) ಪದವಿ ಹಾಗೂ ಬಿ.ಎಸ್ಸಿ (ಅರಣ್ಯ ಶಾಸ್ತ್ರ) ಪದವಿಯನ್ನು ಹೊರತುಪಡಿಸಿ ಇತರೆ ವಿಜ್ಞಾನ ಅಥವಾ ಇಂಜಿನಿಯರಿಂಗ್ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಆಯುಷ್ ಇಲಾಖೆ ನೇಮಕಾತಿ 2020

ವಯೋಮಾನ :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರ್ಣಗೊಳಿಸಿರಬೇಕು.

ಸಾಮಾನ್ಯ ಅರ್ಹತೆ30 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ33 ವರ್ಷ
ಪ.ಜಾ / ಪ.ಪಂ. / ಪ್ರವರ್ಗ 135 ವರ್ಷ

ನಿಗದಿಪಡಿಸಲಾದ ಮಾಸಿಕ ವೇತನ :
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 52,650 – ರೂ. 97,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಪರೀಕ್ಷಾ ವಿಧಾನ :
ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ವ್ಯಕ್ತಿತ್ವ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಪರೀಕ್ಷಾ ಕೇಂದ್ರ :
ಬೆಂಗಳೂರು ಕೇಂದ್ರದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತದೆ

ಕರ್ನಾಟಕ ಲೋಕಸೇವಾ ಆಯೋಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.


• ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ www.kpsc.kar.nic.in ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಪರೀಕ್ಷಾ ಶುಲ್ಕದ ವಿವರ :
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ರೂ. 600/-
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300/-
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50/-
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳು – ರೂ. 35/-

ಪರೀಕ್ಷಾ ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 20, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 20, 2020
ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 21, 2020

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook