ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ | ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆ :
ಸ್ಟೇಟ್ ಪ್ರಾಜೆಕ್ಟ್ ಕೊ-ಆರ್ಡಿನೇಟರ್
ಅಸಿಸ್ಟಂಟ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 2 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಸ್ಟೇಟ್ ಪ್ರಾಜೆಕ್ಟ್ ಕೊ-ಆರ್ಡಿನೇಟರ್ | 01 | ರೂ. 30,000 – ರೂ. 35,000 |
ಅಸಿಸ್ಟಂಟ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ | 01 | ರೂ. 25,000 – ರೂ. 30,000 |
ವಯೋಮಾನ :
ದಿನಾಂಕ 01/01/2021 ಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು 25 ವರ್ಷಗಳಿಗಿಂತ ಕಡಿಮೆ ಇರಬೇಕು.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಭಾಷಾ ಜ್ಞಾನ, ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೇಮಕಾತಿ
ಹುದ್ದೆಯ ವಿಧ :
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅಭ್ಯರ್ಥಿಗಳನ್ನು 11 ತಿಂಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳ ಕಾರ್ಯಕ್ಷಮತೆಯನ್ನು ಆಧರಿಸಿ ಮುಂದಿನ ಅವಧಿಗೆ ಪರಿಗಣಿಸಲಾಗುವುದು
ಆಯ್ಕೆ ವಿಧಾನ :
ಪದವಿಯಲ್ಲಿ ಗಳಿಸಿದ ಅಂಕ, ಅಧ್ಯಯನ ವರದಿಯ ಗುಣಮಟ್ಟ, ಕಾರ್ಯಾನುಭವ ಈ ಎಲ್ಲಾ ಮಾನದಂಡಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾಗುವುದು. ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳನ್ನು, ಈ ಕಛೇರಿಯಿಂದ ಆಯ್ಕೆ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ಪ್ರಾಯೋಗಿಕ ಅಧ್ಯಯನ ನಡೆಸಲು ನಿಯೋಜಿಸಲಾಗುವುದು. ಕ್ಷೇತ್ರ ಭೇಟಿಯ ನಂತರದಲ್ಲಿ ಅಭ್ಯರ್ಥಿಗಳು ಸಿದ್ದಪಡಿಸಿದ ವರದಿಗಳಲ್ಲಿ ಅತ್ಯುತ್ತಮ ವರದಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ www.mgnregakarnataka.com/jobsವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 04, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 20, 2021
ಅಧಿಸೂಚನೆ : Click Here
ಇತರೆ ಮಾಹಿತಿ :
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು (ತೋಟಗಾರಿಕೆ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ (ದೂರವಾಣಿ ಸಂಖ್ಯೆ : 080 – 22342163) ರವರನ್ನು ಸಂಪರ್ಕಿಸಬಹುದು.
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.