ಬಿ.ಎಂ.ಸಿ.ಆರ್.ಐ ನೇಮಕಾತಿ 2020 | ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅಗತ್ಯವಿರುವ ಗ್ರೂಪ್ ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆ :
ಗ್ರೂಪ್ ಡಿ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.
ಹುದ್ದೆಯ ವಿಧ :
ಈ ಸಂಸ್ಥೆಯಲ್ಲಿ ಅಭ್ಯರ್ಥಿಗಳನ್ನು ಕೋವಿಡ್ ಕಾರ್ಯಕ್ಕಾಗಿ 03 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಬಿ.ಎಂ.ಸಿ.ಆರ್.ಐ ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ವಯೋಮಾನ :
ಅಭ್ಯರ್ಥಿಗಳು ಸಂಸ್ಥೆಯ ಮಾನದಂಡಗಳ ಪ್ರಕಾರ ನಿರ್ದಿಷ್ಟ ವಯೋಮಾನ ಹೊಂದಿರಬೇಕು
ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಏಳನೇ ತರಗತಿ ಶೈಕ್ಷಣಿಕ ಅರ್ಹತೆ ಪೂರ್ಣಗೊಳಿಸಿರಬೇಕು
ಉದ್ಯೋಗ ಮಾಹಿತಿ : ಕೊಂಕಣ ರೈಲ್ವೆ ನೇಮಕಾತಿ 2020
ನಿಗದಿಪಡಿಸಲಾದ ಮಾಸಿಕ ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 16,500 ವೇತನ ನೀಡಲಾಗುತ್ತದೆ
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ನೇರ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಬಿ.ಎಂ.ಸಿ.ಆರ್.ಐನಲ್ಲಿ ಖಾಲಿಯಿರುವ ಗ್ರೂಪ್ ಡಿ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಅಧಿಕೃತ ವೆಬ್‌ಸೈಟ್ www.bmcri.org ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ, ದೂರವಾಣಿ ಸಂಖ್ಯೆ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನ ದಿನದಂದು ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅಧಿಸೂಚನೆ ಹೊರಡಿಸಿದ ದಿನಾಂಕ : ಅಕ್ಟೋಬರ್ 23, 2020
ಸಂದರ್ಶನ ನಡೆಯುವ ದಿನಾಂಕ : ನವೆಂಬರ್ 04, 2020 ರಿಂದ ನವೆಂಬರ್ 06, 2020
ಸಂದರ್ಶನ ನಡೆಯುವ ಸಮಯ : ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 04.00 ಗಂಟೆಯವರೆಗೆ
ಸಂದರ್ಶನಕ್ಕೆ ಹಾಜರಾಗುವ ಸ್ಥಳ :
ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಕಛೇರಿಯ ಎದುರು ಇರುವ ಆವರಣ, ಕೆ.ಆರ್.ರಸ್ತೆ , ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದೆ
ಅಧಿಸೂಚನೆ ಹಾಗೂ ಅರ್ಜಿ ನಮೂನೆ : Click Here
ಇತರೆ ಮಾಹಿತಿ :
ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವಾಗ ಭರ್ತಿ ಮಾಡಿದ ಅರ್ಜಿ ನಮೂನೆ, ತಮ್ಮ ಮೂಲ ಶೈಕ್ಷಣಿಕ ದಾಖಲೆಗಳು, ಆಧಾರ್ ಕಾರ್ಡ್, ಇತರೆ ಅಗತ್ಯ ದಾಖಲೆಗಳು ಹಾಗೂ 01 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗುವುದು
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು
ದೂರವಾಣಿ – 080-26700810
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.