ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ನೇಮಕಾತಿ 2021

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ದಲ್ಲಿ ಖಾಲಿಯಿರುವ ಲೆಕ್ಕಿಗ, ಕಛೇರಿ ಜವಾನರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ನೇಮಕಾತಿ : ಹುದ್ದೆಗಳ ವಿವರ

ಹುದ್ದೆ : ಯೋಜನಾ ನಿರ್ದೇಶಕರು, ಗುಮಾಸ್ತ ಕಂ ಲೆಕ್ಕಿಗ, ಕಛೇರಿ ಜವಾನರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 03 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಯೋಜನಾ ನಿರ್ದೇಶಕರು0119,965
ಗುಮಾಸ್ತ ಕಂ ಲೆಕ್ಕಿಗ0113,310
ಕಛೇರಿ ಜವಾನರು0110,648

ಶೈಕ್ಷಣಿಕ ಅರ್ಹತೆ :
• ಯೋಜನಾ ನಿರ್ದೇಶಕರು ಹುದ್ದೆಗೆ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ಎಂ.ಎಸ್.ಡಬ್ಲ್ಯೂ/ಅಭಿವೃದ್ಧಿ ಅಧ್ಯಯನ/ ಲಾಭರಹಿತ ಸಂಸ್ಥೆಗಳ ನಿರ್ವಹಣಾಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಬಿ.ಕಾಂ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ಕಛೇರಿ ಜವಾನರು ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು.

ವಯೋಮಾನ : ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು 40 ವರ್ಷ ವಯೋಮಾನದೊಳಗಿರಬೇಕು.

ಆಯ್ಕೆ ವಿಧಾನ : ಅಭ್ಯರ್ಥಿಗಳನ್ನು ಕಂಪ್ಯೂಟರ್ ಪರೀಕ್ಷೆ ಹಾಗೂ ನೇರ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : Dhfws Tumkur Recruitment 2021 | 34 ವೈದ್ಯರು, ಶುಶ್ರೂಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ವಿಜಯಪುರ ಜಿಲ್ಲಾ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು,
ಜಿಲ್ಲಾ ಬಾಲಕಾರ್ಮಿಕ ಯೋಜನಾ ಕಛೇರಿ, ಕಾರ್ಮಿಕ ಇಲಾಖೆ, ಅಲ್ಲಾಪುರ ಓಣಿ, ಸಿಂಧಗಿ ನಾಕಾ, ವಿಜಯಪುರ

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 12, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 12, 2021

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ : ಪ್ರಮುಖ ಲಿಂಕ್

ಅಧಿಸೂಚನೆ ಹಾಗೂ ಅರ್ಜಿ ನಮೂನೆ : Click Here

ಹೆಚ್ಚಿನ ಮಾಹಿತಿಗಾಗಿ 08352-242778, 9743351890ಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.