ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನೇಮಕಾತಿ 2020

ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನೇಮಕಾತಿ 2020 | ಕರ್ನಾಟಕ ಜಾಬ್ ಇನ್ಫೋಗೆ ಸ್ವಾಗತ | ಯಾದಗಿರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಛೇರಿಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅನುಭವ, ಮಾಸಿಕ ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಸಮಾಜ ಕಾರ್ಯಕರ್ತರು (ಪುರುಷ ಹಾಗೂ ಮಹಿಳೆ)
ಆಪ್ತ ಸಮಾಲೋಚಕರು (ಮಹಿಳೆ)

ಕರ್ತವ್ಯ ಸ್ಥಳ :
ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಹುದ್ದೆಯ ವಿಧ :
ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳಿಗೆ ನೇಮಕ

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಹುದ್ದೆಹುದ್ದೆಗಳ ಸಂಖ್ಯೆವಯೋಮಾನ
ಸಮಾಜ ಕಾರ್ಯಕರ್ತರು02ಕನಿಷ್ಠ 22, ಗರಿಷ್ಠ 30 ವರ್ಷ
ಆಪ್ತ ಸಮಾಲೋಚಕರು01ಕನಿಷ್ಠ 25, ಗರಿಷ್ಠ 40 ವರ್ಷ

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಸಮಾಜ ಕಾರ್ಯಕರ್ತರು ಹುದ್ದೆಗೆ ಬಿ.ಎ ಸಮಾಜ ಶಾಸ್ತ್ರ / ಬಿ.ಎಸ್.ಡಬ್ಲ್ಯೂ ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ಆಪ್ತ ಸಮಾಲೋಚಕರು ಹುದ್ದೆಗೆ ಎಂ.ಎ / ಎಂ.ಎಸ್ಸಿ ಮನೋವಿಜ್ಞಾನ ಹಾಗೂ 03 ವರ್ಷಗಳು ಕಾರ್ಯನಿರ್ವಹಿಸಿದ ಅನುಭವ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ನಿಗದಿಪಡಿಸಲಾದ ಮಾಸಿಕ ವೇತನ :
ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 16,116 – ರೂ. 17,500 ವೇತನ ನೀಡಲಾಗುತ್ತದೆ

ಅನುಭವ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕನಿಷ್ಠ 01 ವರ್ಷ ಅನುಭವ ಹಾಗೂ ಸಮಾಲೋಚಕರಾಗಿ ಕನಿಷ್ಠ 02 ವರ್ಷ ಸೇವೆ ಸಲ್ಲಿಸಿರುವ ಅನುಭವವನ್ನು ಹೊಂದಿರಬೇಕು.

ಉದ್ಯೋಗ ಮಾಹಿತಿ : ಚಾಮರಾಜನಗರ ಜಿಲ್ಲಾ ಪಂಚಾಯತ್ ನೇಮಕಾತಿ 2020

ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳ ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ಅಧಿಕೃತ ವೆಬ್‌ಸೈಟ್ http://yadgir.nic.in ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ ಹಾಗೂ ಪಾವತಿಸುವ ವಿಧಾನ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ. 100 ಗಳ ಡಿಡಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ರವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ಕಛೇರಿಗೆ ಸಲ್ಲಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 05, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 05, 2020

ಅಧಿಸೂಚನೆ : Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಬಹುದು
ದೂರವಾಣಿ ಸಂಖ್ಯೆ : 08473-253347

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.