ಯುಕೋ ಬ್ಯಾಂಕ್ ನೇಮಕಾತಿ 2020 | UCO Bank Recruitment 2020

ಯುಕೋ ಬ್ಯಾಂಕ್ ನೇಮಕಾತಿ 2020 | ಯುಕೋ ಬ್ಯಾಂಕ್ ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಸೆಕ್ಯೂರಿಟಿ ಆಫೀಸರ್ಸ್, ಇಂಜಿನಿಯರ್ (ಸಿವಿಲ್, ಎಲೆಕ್ಟ್ರಿಕಲ್, ಆರ್ಕಿಟೆಕ್ಟ್), ಎಕನಾಮಿಸ್ಟ್, ಸ್ಟಾಟಿಸ್ಟಿಷಿಯನ್, ಐಟಿ ಆಫೀಸರ್, ಚಾರ್ಟರ್ಡ್ ಅಕೌಂಟೆಂಟ್ಸ್

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಯುಕೋ ಬ್ಯಾಂಕ್ ಒಟ್ಟು 91 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

ಹುದ್ದೆಹುದ್ದೆಗಳ ಸಂಖ್ಯೆವಯೋಮಾನ
ಸೆಕ್ಯೂರಿಟಿ ಆಫೀಸರ್ಸ್0921 – 40 ವರ್ಷ
ಇಂಜಿನಿಯರ್0821 – 30 ವರ್ಷ
ಎಕನಾಮಿಸ್ಟ್0221 – 30 ವರ್ಷ
ಸ್ಟಾಟಿಸ್ಟಿಷಿಯನ್0221 – 30 ವರ್ಷ
ಐಟಿ ಆಫೀಸರ್2021 – 30 ವರ್ಷ
ಚಾರ್ಟರ್ಡ್ ಅಕೌಂಟೆಂಟ್ಸ್5021 – 30 ವರ್ಷ

ವಯೋಮಾನ ಸಡಿಲಿಕೆ :
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ,
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ,
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ, ಪಿ.ಎಚ್.ಡಿ, ಬಿಇ/ ಬಿ.ಟೆಕ್, ಚಾರ್ಟರ್ಡ್ ಅಕೌಂಟೆಂಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಡೆದಿರಬೇಕು.

ಉದ್ಯೋಗ ಮಾಹಿತಿ : ಐಬಿಪಿಎಸ್ ನೇಮಕಾತಿ 2020 | 1556 ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನಿಗದಿಪಡಿಸಲಾದ ಮಾಸಿಕ ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 23,700 – ರೂ. 45,950 ರ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಯುಕೋ ಬ್ಯಾಂಕಿನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಯುಕೋ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ www.ucobank.com ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ, ಮೊಬೈಲ್ ನಂಬರ್ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು ರೂ. 1,180 ಪಾವತಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳು ರೂ. 118 ಪಾವತಿಸಬೇಕು.

ಅರ್ಜಿ ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 17, 2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 17, 2020
ಆನ್‌ಲೈನ್‌ ಪರೀಕ್ಷೆ ದಿನಾಂಕ : ಡಿಸೆಂಬರ್ 2020/ ಜನವರಿ 2021

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.