ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ ನೇಮಕಾತಿ 2021

ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Junior Assistant Cum Sales Clerk Jobs : Details of Vacancies

ಹುದ್ದೆ : ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಂಗೀಕೃತ ವಿಶ್ವವಿದ್ಯಾನಿಲಯದ ಯಾವುದೇ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಕಲಿತಿರಬೇಕು ಹಾಗೂ ಭಾಷಾ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ಸ್ ತರಬೇತಿ ಮತ್ತು ಜ್ಞಾನ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾ/ಪ.ಪಂ/ಪ್ರ~1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ದಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಉದ್ಯೋಗ ಮಾಹಿತಿ : Dakshina Kannada District Court Recruitment 2021 : 34 ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾ
ಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಂಘದ ಕೇಂದ್ರ ಕಚೇರಿಗೆ ಕೆಲಸದ ವೇಳೆಯಲ್ಲಿ ಹಾಜರಾಗಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಸ್ವಯಂ ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಅಥವಾ ಕಛೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ., ಸರ್ಜಾಪುರ ~ 562125, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ

ಅರ್ಜಿ ಶುಲ್ಕ : ಅಭ್ಯರ್ಥಿಗಳು ಸಂಘದ ಕೇಂದ್ರ ಕಛೇರಿಗೆ ಕೆಲಸದ ವೇಳೆಯಲ್ಲಿ ಹಾಜರಾಗಿ ರೂ. 1000 ಪಾವತಿಸಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 23, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 24, 2021 ಜುಲೈ 09, 2021

Junior Assistant Cum Sales Clerk Jobs : Important Links

ಅಧಿಸೂಚನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.