ಸಮಾಲೋಚಕರು ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ | RDPR Karnataka Recruitment 2020

ಸಮಾಲೋಚಕರು ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಸಮಾಲೋಚಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
• JJM ಸಮಾಲೋಚಕರು : 02 ಹುದ್ದೆ
ಶೈಕ್ಷಣಿಕ ಅರ್ಹತೆ : ಸಿವಿಲ್ ಇಂಜಿನಿಯರಿಂಗ್, ಎಂಬಿಎ
ವೇತನ : ರೂ. 75,000 ರಿಂದ ರೂ. 1,00,000

• ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಸಿವಿಲ್ ಇಂಜಿನಿಯರಿಂಗ್
ವೇತನ : ರೂ. 35,000 ರಿಂದ ರೂ. 45,000

• ಜಿಲ್ಲಾ ಯೋಜನಾ ವ್ಯವಸ್ಥಾಪಕ : 03 ಹುದ್ದೆ
ಶೈಕ್ಷಣಿಕ ಅರ್ಹತೆ : ಸ್ನಾತಕೋತ್ತರ ಪದವಿ
ವೇತನ : ರೂ. 35,000 ರಿಂದ ರೂ. 45,000

• ಜಿಲ್ಲಾ MIS ಸಮಾಲೋಚಕರು : 08 ಹುದ್ದೆ
ಶೈಕ್ಷಣಿಕ ಅರ್ಹತೆ : ಎಂಸಿಎ, ಎಂಎಸ್ಸಿ ಕಂಪ್ಯೂಟರ್ ಸೈನ್ಸ್ / ಬಿಇ ಕಂಪ್ಯೂಟರ್ ಸೈನ್ಸ್
ವೇತನ : ರೂ. 22,000 ರಿಂದ ರೂ. 25,000

• ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು : 02 ಹುದ್ದೆ
ಶೈಕ್ಷಣಿಕ ಅರ್ಹತೆ : ಸ್ನಾತಕೋತ್ತರ ಪದವಿ
ವೇತನ : ರೂ. 22,000

ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು : 04 ಹುದ್ದೆ
ಶೈಕ್ಷಣಿಕ ಅರ್ಹತೆ : ಇಂಜಿನಿಯರಿಂಗ್ ಪದವಿ
ವೇತನ : ರೂ. 22,000

• ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು : 03 ಹುದ್ದೆ
ಶೈಕ್ಷಣಿಕ ಅರ್ಹತೆ : ಸಿವಿಲ್ ಇಂಜಿನಿಯರಿಂಗ್
ವೇತನ : ರೂ. 22,000

• ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಸಮಾಲೋಚಕರು : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಎಂಸಿಎ, ಎಂಎಸ್ಸಿ ಕಂಪ್ಯೂಟರ್ ಸೈನ್ಸ್/ ಬಿಇ ಕಂಪ್ಯೂಟರ್ ಸೈನ್ಸ್
ವೇತನ : ರೂ. 22,000

• ಮಾನವ ಸಂಪನ್ಮೂಲ ಅಭಿವೃದ್ಧಿ : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಎಂ.ಎಸ್.ಡಬ್ಲ್ಯೂ/ ಎಂಎ
ವೇತನ : ರೂ. 22,000

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಗದಗ, ಬಳ್ಳಾರಿ, ಉತ್ತರ ಕನ್ನಡ, ಕೊಪ್ಪಳ, ಕೊಡಗು, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಹಾವೇರಿ, ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 25 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ವಿಧ :
ಅಭ್ಯರ್ಥಿಗಳನ್ನು ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ವಯೋಮಾನ :
ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳಿಗೆ 45 ವರ್ಷಗಳು ಮೀರಿರಬಾರದು

ಉದ್ಯೋಗ ಮಾಹಿತಿ : ಪೊಲೀಸ್ ಇಲಾಖೆ ನೇಮಕಾತಿ 2020

ಆಯ್ಕೆ ವಿಧಾನ :
ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತದೆ, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್‌ಸೈಟ್ rdpr.kar.nic.in ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು, Resume ಹಾಗೂ ಅರ್ಜಿ ಜೊತೆಗೆ “”ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ” ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು

ಅರ್ಜಿ ಸಲ್ಲಿಸುವ ವಿಳಾಸ :
ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ, ಬೆಂಗಳೂರು

ನಿಗದಿತ ಅರ್ಜಿ ಶುಲ್ಕದ ವಿವರ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 12, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 30, 2020

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.