ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಉದ್ಯೋಗಾವಕಾಶ | SSC Recruitment 2020

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಉದ್ಯೋಗಾವಕಾಶ | ಸಿಬ್ಬಂದಿ ನೇಮಕಾತಿ ಆಯೋಗವು ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಲೋವರ್ ಡಿವಿಷನ್ ಕ್ಲರ್ಕ್
ಪೋಸ್ಟಲ್ ಅಸಿಸ್ಟೆಂಟ್
ಡೇಟಾ ಎಂಟ್ರಿ ಆಪರೇಟರ್

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 6000 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೇತನ :

ಹುದ್ದೆವೇತನ
ಲೋವರ್ ಡಿವಿಷನ್ ಕ್ಲರ್ಕ್ರೂ. 19,900 – ರೂ. 63,200
ಪೋಸ್ಟಲ್ ಅಸಿಸ್ಟೆಂಟ್ರೂ. 25,500 – ರೂ. 81,100
ಡೇಟಾ ಎಂಟ್ರಿ ಆಪರೇಟರ್ರೂ. 25,500 – ರೂ. 81,100

ವಯೋಮಾನ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
ಪಿಡಬ್ಲ್ಯೂಡಿ ಅಭ್ಯರ್ಥಿ – 10 ವರ್ಷ
2ಎ, 2ಬಿ, 3ಎ, 3ಬಿ – 3 ವರ್ಷ
ಎಸ್ಸಿ, ಎಸ್ಟಿ ಅಭ್ಯರ್ಥಿ – 5 ವರ್ಷ

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಯುಸಿ ಅಥವಾ 10+2 ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು

ಉದ್ಯೋಗ ಮಾಹಿತಿ : ಸಮಾಲೋಚಕರು ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿಯಿರುವ ವಿವಿಧ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್‌ಸೈಟ್ www.ssc.nic.in ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಉಳಿದ ಅಭ್ಯರ್ಥಿಗಳು ರೂ.100 ಪಾವತಿಸಬೇಕು

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಅರ್ಜಿ ಶುಲ್ಕ ಪಾವತಿಸಬಹುದು ಅಥವಾ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಅರ್ಜಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 06, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 15, 2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 17, 2020

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.