ಹುಬ್ಬಳ್ಳಿ ರೈಲ್ವೆ ನೇಮಕಾತಿ | South Western Railway Recruitment

ಹುಬ್ಬಳ್ಳಿ ರೈಲ್ವೆ ಯಲ್ಲಿ ಉದ್ಯೋಗಾವಕಾಶ | ಹುಬ್ಬಳ್ಳಿ ರೈಲ್ವೆ ಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಅಪ್ರೆಂಟಿಸ್

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಹುಬ್ಬಳ್ಳಿ, ಬೆಂಗಳೂರು ಹಾಗೂ ಮೈಸೂರು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 1004 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Divisionಹುದ್ದೆಗಳ ಸಂಖ್ಯೆ
Hubballi Division287
Carriage Repair Workshop, Hubballi217
Bengalore Division280
Mysore177
Central Workshop, Mysore43

ವಯೋಮಾನ :
ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ, ಗರಿಷ್ಠ 24 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿ ~ 05 ವರ್ಷ
ಒಬಿಸಿ ಅಭ್ಯರ್ಥಿ ~ 03 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿ ~ 10 ವರ್ಷ

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಜೊತೆಗೆ ಐಟಿಐ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಮಾಹಿತಿ : ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಆಯ್ಕೆ ವಿಧಾನ :
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ (ಒಟ್ಟು ಅಂಕಗಳಲ್ಲಿ 50%, ಮೆಟ್ರಿಕ್ಯುಲೇಷನ್ ಮತ್ತು ಐಟಿಐ ಎರಡರಲ್ಲೂ) ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಹುಬ್ಬಳ್ಳಿ ರೈಲ್ವೆಯಲ್ಲಿ ಖಾಲಿಯಿರುವ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್ www.rrchubli.in ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100 ಪಾವತಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 10, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 09, 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 09, 2021

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.