ಕರ್ನಾಟಕ ಅಂಚೆ ವೃತ್ತ ನೇಮಕಾತಿ | Karnataka Postal Circle Recruitment 2020

ಕರ್ನಾಟಕ ಅಂಚೆ ವೃತ್ತ ನೇಮಕಾತಿ 2020 | ಕರ್ನಾಟಕ ಅಂಚೆ ವೃತ್ತ ದಲ್ಲಿ ಖಾಲಿಯಿರುವ ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಗ್ರಾಮೀಣ ಡಾಕ್ ಸೇವಕರು

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಅಂಚೆ ವೃತ್ತದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 2443 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರವರ್ಗಹುದ್ದೆ
EWS266
OBC 605
PWD-A13
PWD-B22
PWD-C30
PWD-DE11
SC322
ST147
UR1027

ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 10,000 ರಿಂದ ರೂ. 12,000 ವೇತನ ನೀಡಲಾಗುತ್ತದೆ.

ವಯೋಮಾನ :
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ

ವಯೋಮಿತಿ ಸಡಿಲಿಕೆ :
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ,
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ,
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಜೊತೆಗೆ 60 ದಿನಗಳ ಮೂಲ ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹೊಂದಿರಬೇಕು.

ಉದ್ಯೋಗ ಮಾಹಿತಿ : ಹುಬ್ಬಳ್ಳಿ ರೈಲ್ವೆ ಯಲ್ಲಿ ಉದ್ಯೋಗಾವಕಾಶ

ಆಯ್ಕೆ ವಿಧಾನ :
ಅಭ್ಯರ್ಥಿಗಳು 10ನೇ ತರಗತಿಯ ಶೈಕ್ಷಣಿಕ ಅರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ, ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ಅಂಚೆ ವೃತ್ತದಲ್ಲಿನ ಗ್ರಾಮೀಣ ಡಾಕ್ ಸೇವಕ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ, ದೂರವಾಣಿ ಸಂಖ್ಯೆ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳು ರೂ. 100 ಪಾವತಿಸಬೇಕು
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ :
ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 21, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 20, 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 20, 2021

ಅಧಿಸೂಚನೆ : Click Here
ಅರ್ಜಿಸಲ್ಲಿಸಿ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook