ಕರ್ನಾಟಕ ಹೈಕೋರ್ಟ್ ನೇಮಕಾತಿ 2020 | ಕರ್ನಾಟಕ ಜಾಬ್ ಇನ್ಫೋಗೆ ಸ್ವಾಗತ | ಕರ್ನಾಟಕ ಹೈಕೋರ್ಟ್ ನಲ್ಲಿ ಅಗತ್ಯವಿರುವ 33 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಪರೀಕ್ಷಾ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆ :
Law Clerks cum Research Assistants
ಕರ್ತವ್ಯ ಸ್ಥಳ :
ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.
ಹುದ್ದೆಯ ವಿಧ :
ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಕರ್ನಾಟಕ ಹೈಕೋರ್ಟ್ ನಲ್ಲಿ ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಹಾಗೂ ಕಂಪ್ಯೂಟರ್ ಬಳಕೆಯ ಜ್ಞಾನವನ್ನು ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ 2020
ವಯೋಮಾನ :
ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 ವರ್ಷ ಪೂರ್ಣಗೊಳಿಸಿರಬಾರದು.
ನಿಗದಿಪಡಿಸಲಾದ ಮಾಸಿಕ ವೇತನ :
ಕರ್ನಾಟಕ ಹೈಕೋರ್ಟ್ ನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 16,500 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಶೈಕ್ಷಣಿಕ ದಾಖಲೆ ಪರಿಶೀಲಿಸಿ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.
ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಕಛೇರಿಯ ವಿಳಾಸಕ್ಕೆ ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.
ಅರ್ಜಿ ಸಲ್ಲಿಕೆಯ ವಿಳಾಸ :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
The Registrar General,
High Court of Karnataka,
Bengaluru, Karnataka
ನಿಗದಿತ ಪರೀಕ್ಷಾ ಶುಲ್ಕದ ವಿವರ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 15, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 17, 2020
ಅಧಿಸೂಚನೆ : Click Here
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.