ಕಿಮ್ಸ್ ಕಾರವಾರ ನೇಮಕಾತಿ 2020 | 36 ಬೋಧಕ ವೃಂದದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಿಮ್ಸ್ ಕಾರವಾರ ನೇಮಕಾತಿ 2020 | ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್ ಕಾರವಾರ) ದಲ್ಲಿ ಅಗತ್ಯವಿರುವ ಬೋಧಕ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಪ್ರಾಧ್ಯಾಪಕರು/ ಸೂಪರ್ ಸ್ಪೆಷಾಲಿಸ್ಟ್
ಪ್ರಾಧ್ಯಾಪಕರು
ಸಹ ಪ್ರಾಧ್ಯಾಪಕರು
ಸಹಾಯಕ ಪ್ರಾಧ್ಯಾಪಕರು

ಕರ್ತವ್ಯ ಸ್ಥಳ :
ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಕಾರವಾರದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಕಿಮ್ಸ್ ಕಾರವಾರದಲ್ಲಿ ಒಟ್ಟು 36 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆಗರಿಷ್ಠ ವಯೋಮಿತಿ
ಪ್ರಾಧ್ಯಾಪಕರು/ ಸೂಪರ್ ಸ್ಪೆಷಾಲಿಸ್ಟ್07 ಹುದ್ದೆಸಾಮಾನ್ಯ – 50 ವರ್ಷ,
ಒಬಿಸಿ – 53 ವರ್ಷ,
ಎಸ್ಸಿ ಎಸ್ಟಿ – 55 ವರ್ಷ
ಪ್ರಾಧ್ಯಾಪಕರು07 ಹುದ್ದೆಸಾಮಾನ್ಯ – 50 ವರ್ಷ,
ಒಬಿಸಿ – 53 ವರ್ಷ,
ಎಸ್ಸಿ ಎಸ್ಟಿ – 55 ವರ್ಷ
ಸಹ ಪ್ರಾಧ್ಯಾಪಕರು05 ಹುದ್ದೆಸಾಮಾನ್ಯ – 45 ವರ್ಷ,
ಒಬಿಸಿ – 48 ವರ್ಷ,
ಎಸ್ಸಿ ಎಸ್ಟಿ – 50 ವರ್ಷ
ಸಹಾಯಕ ಪ್ರಾಧ್ಯಾಪಕರು17 ಹುದ್ದೆಸಾಮಾನ್ಯ – 38 ವರ್ಷ,
ಒಬಿಸಿ – 40 ವರ್ಷ,
ಎಸ್ಸಿ ಎಸ್ಟಿ – 43 ವರ್ಷ

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಡಿ/ ಎಂಎಸ್ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಹಾಗೂ ಎಂ.ಸಿ.ಐ/ ಎನ್.ಎಂ.ಸಿ ನಿಯಮಾವಳಿಗಳ ಪ್ರಕಾರ ಸೇವಾನುಭವ ಹೊಂದಿರಬೇಕು. ಎಂ.ಸಿ.ಐ/ ಎನ್.ಎಂ.ಸಿ ಮಾನ್ಯತೆ ಪಡೆಯದೇ ಇರುವ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ನೇಮಕಾತಿ 2020

ನಿಗದಿಪಡಿಸಲಾದ ಮಾಸಿಕ ವೇತನ :
ಸಂಸ್ಥೆಯ ಮಾನದಂಡಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಗದಿತ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :
ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕಿಮ್ಸ್ ಕಾರವಾರ ದ ಅಧಿಕೃತ ವೆಬ್‌ಸೈಟ್ www.kimskarwar.kar.nic.in ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಂಸ್ಥೆಯ ವಿಳಾಸಕ್ಕೆ ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.

ಅರ್ಜಿ ಸಲ್ಲಿಕೆಯ ವಿಳಾಸ :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ನಿರ್ದೇಶಕರ ಕಛೇರಿ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಾರವಾರ

ನಿಗದಿತ ಅರ್ಜಿ ಶುಲ್ಕದ ವಿವರ :
ಅಭ್ಯರ್ಥಿಗಳು ರೂ. 500 ಡಿಡಿಯನ್ನು ನಿರ್ದೇಶಕರು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಾರವಾರ ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ಕಳುಹಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 20, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 06, 2020

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook