ಕೆನರಾ ಬ್ಯಾಂಕ್ ನೇಮಕಾತಿ 2020

ಕೆನರಾ ಬ್ಯಾಂಕ್ ನೇಮಕಾತಿ 2020 | ಕೆನರಾ ಬ್ಯಾಂಕ್ ನಲ್ಲಿ ಖಾಲಿಯಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಸ್ಪೆಷಲಿಸ್ಟ್ ಆಫೀಸರ್

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 220 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೇತನ :
ScaleJMGS-I : ರೂ. 23,700 – ರೂ. 42,020
ScaleMMGS-II : ರೂ. 31,705 – ರೂ. 45,950
ScaleMMGS-III : ರೂ. 42,020 – ರೂ. 51,490

ವಯೋಮಾನ :
ScaleJMGS-I : ಕನಿಷ್ಠ 20 ವರ್ಷ, ಗರಿಷ್ಠ 30 ವರ್ಷ
ScaleMMGS-II : ಕನಿಷ್ಠ 22 ವರ್ಷ, ಗರಿಷ್ಠ 35 ವರ್ಷ
ScaleMMGS-III : ಕನಿಷ್ಠ 25 ವರ್ಷ, ಗರಿಷ್ಠ 38 ವರ್ಷ

ವಯೋಮಿತಿ ಸಡಿಲಿಕೆ :
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 3 ವರ್ಷ
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಇ/ ಎಂ.ಟೆಕ್, ಬಿಇ/ ಬಿ.ಟೆಕ್, ಎಂಸಿಎ, ಎಂಬಿಎ, ಸಿಎ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ :
ಆನ್‌ಲೈನ್‌ ಪರೀಕ್ಷೆ, ಗುಂಪು ಚರ್ಚೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಕೆನರಾ ಬ್ಯಾಂಕ್ ನ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಅಧಿಕೃತ ವೆಬ್‌ಸೈಟ್ www.canarabank.com ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕ ಪಾವತಿಸಬೇಕು
ಉಳಿದ ಎಲ್ಲಾ ಅಭ್ಯರ್ಥಿಗಳು ರೂ.600+GST ಪಾವತಿಸಬೇಕು

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ ನೆಟ್ ಬ್ಯಾಂಕಿಂಗ್ ಮುಖಾಂತರ ಅರ್ಜಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 25, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 15, 2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 15, 2020
ಆನ್‌ಲೈನ್‌ ಪರೀಕ್ಷೆ ದಿನಾಂಕ : ಜನವರಿ/ ಫೆಬ್ರವರಿ 2021

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.