ಕೊಂಕಣ ರೈಲ್ವೆ ನೇಮಕಾತಿ 2020 | ಕೊಂಕಣ ರೈಲ್ವೆಯಲ್ಲಿ ಅಗತ್ಯವಿರುವ ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆ :
ಟೆಕ್ನಿಷಿಯನ್ / ಎಲೆಕ್ಟ್ರಿಕಲ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಕೊಂಕಣ ರೈಲ್ವೆ ಒಟ್ಟು 58 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.
ವಯೋಮಾನ :
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 33 ವರ್ಷ ವಯೋಮಾನ ನಿಗದಿಪಡಿಸಲಾಗಿದೆ
ವಯೋಮಾನ ಸಡಿಲಿಕೆ :
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ,
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ
ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್.ಎಸ್.ಎಲ್.ಸಿ ಜೊತೆಗೆ ಐಟಿಐ ವಿದ್ಯಾರ್ಹತೆಯನ್ನು ಇಲೆಕ್ಟ್ರೀಷಿಯನ್, ವೈಯರ್ಮ್ಯಾನ್, ಮೆಕ್ಯಾನಿಕ್ ಹೆಚ್ಟಿ, ಕೇಬಲ್ ಜಾಯಿಂಟಿಂಗ್, ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಟ್ರೇಡ್ಗಳಲ್ಲಿ ಪಡೆದಿರಬೇಕು.
ಉದ್ಯೋಗ ಮಾಹಿತಿ : ಐಬಿಪಿಎಸ್ ನೇಮಕಾತಿ 2020 | 1556 ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ನಿಗದಿಪಡಿಸಲಾದ ಮಾಸಿಕ ವೇತನ :
7th CPC Pay Matrix Level 02 with other allowances as admissible under the CDA scale
ಆಯ್ಕೆ ವಿಧಾನ :
ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಕೊಂಕಣ ರೈಲ್ವೆ ಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕೊಂಕಣ ರೈಲ್ವೆ ಯ ಅಧಿಕೃತ ವೆಬ್ಸೈಟ್ www.konkanrailway.com ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ, ಮೊಬೈಲ್ ನಂಬರ್ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳು ರೂ. 250 ಪಾವತಿಸಬೇಕು.
ಉಳಿದ ಅಭ್ಯರ್ಥಿಗಳು ರೂ. 500 ಪಾವತಿಸಬೇಕು.
ಅರ್ಜಿ ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಬಳಸಿ ಶುಲ್ಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 28, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 27, 2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 27, 2020
ಅಧಿಸೂಚನೆ : Click Here
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.