ಗುಪ್ತಚರ ಇಲಾಖೆ ನೇಮಕಾತಿ 2020

ಗುಪ್ತಚರ ಇಲಾಖೆ ನೇಮಕಾತಿ 2020 | ಗುಪ್ತಚರ ಇಲಾಖೆಯಲ್ಲಿ ಅಗತ್ಯವಿರುವ ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO II/Exe)

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 2000 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 44,900 ರಿಂದ ರೂ. 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ :
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಾನ ನಿಗದಿಪಡಿಸಲಾಗಿದೆ

ವಯೋಮಿತಿ ಸಡಿಲಿಕೆ :
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ,
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ,

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ವೃತ್ತ ನೇಮಕಾತಿ

ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷಾ ಕೇಂದ್ರಗಳು :
ಕರ್ನಾಟಕದಲ್ಲಿ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.

ಗುಪ್ತಚರ ಇಲಾಖೆ ಯ ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಗುಪ್ತಚರ ಇಲಾಖೆಯ ಅಧಿಕೃತ ವೆಬ್‌ಸೈಟ್ www.mha.gov.inವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ, ದೂರವಾಣಿ ಸಂಖ್ಯೆ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳು ರೂ. 600 ಪಾವತಿಸಬೇಕು
ಎಸ್ಸಿ, ಎಸ್ಟಿ, ಮಹಿಳಾ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ರೂ. 500 ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ :
ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 19, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 09, 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 09, 2021

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.