ಜಿಲ್ಲಾ ನ್ಯಾಯಾಧೀಶರು ಹುದ್ದೆಯ ಭರ್ತಿ | ಕರ್ನಾಟಕ ಹೈಕೋರ್ಟ್ ನೇಮಕಾತಿ 2020

ಕರ್ನಾಟಕ ಹೈಕೋರ್ಟ್ ನೇಮಕಾತಿ 2020 | ಕರ್ನಾಟಕ ಜಾಬ್ ಇನ್ಫೋಗೆ ಸ್ವಾಗತ | ಕರ್ನಾಟಕ ಹೈಕೋರ್ಟ್ ನಲ್ಲಿ ಅಗತ್ಯವಿರುವ 30 ಜಿಲ್ಲಾ ನ್ಯಾಯಾಧೀಶರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಮಾಸಿಕ ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಜಿಲ್ಲಾ ನ್ಯಾಯಾಧೀಶರು (District Judges)

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಹೈಕೋರ್ಟಿನಲ್ಲಿ ಅಗತ್ಯವಿರುವ 30 ಹುದ್ದೆಯ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಅದರಲ್ಲಿ 23 ಬ್ಯಾಕ್ ಲಾಗ್ ಹುದ್ದೆ ಹಾಗೂ 07 ಹೊಸ ಹುದ್ದೆಗಳಿವೆ.

ಕರ್ತವ್ಯ ಸ್ಥಳ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಕಾನೂನು ಪದವಿ ಹೊಂದಿರಬೇಕು.

ವಯೋಮಾನ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ನಿಗದಿಪಡಿಸಲಾದ ಮಾಸಿಕ ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 51,550/- ರಿಂದ ರೂ. 63,070/- ರ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಬೆಳಗಾವಿ ಹಾಗೂ ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ

ಆಯ್ಕೆ ಪ್ರಕ್ರಿಯೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
• Preliminary Examination
• Main Examination
• Viva-Voce
• Interview

ಅರ್ಜಿ ಸಲ್ಲಿಕೆಯ ವಿಧಾನ :
• ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು
• ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟಿನ ಅಧಿಕೃತ ವೆಬ್‌ಸೈಟ್ https://karnatakajudiciary.kar.nic.in/recruitment.asp ವಿಳಾಸಕ್ಕೆ ಭೇಟಿ ನೀಡಿ ಆನ್‌ಲೈನ್‌ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• Preliminary Examination Fee :
ಎಸ್ಸಿ, ಎಸ್ಟಿ, ಪ್ರವರ್ಗ 1 – ರೂ. 250/-
ಇತರೆ ಅಭ್ಯರ್ಥಿಗಳು – ರೂ. 500/-

• Main Examination Fee :
ಎಸ್ಸಿ, ಎಸ್ಟಿ, ಪ್ರವರ್ಗ 1 – ರೂ. 750/-
ಇತರೆ ಅಭ್ಯರ್ಥಿಗಳು – ರೂ. 1,000/-

ಅರ್ಜಿ ಶುಲ್ಕ ಪಾವತಿಸುವ ವಿಧಾನ :
‌ಆನ್‌ಲೈನ್‌ ಮುಖಾಂತರ ಅರ್ಜಿ ಶುಲ್ಕ ಪಾವತಿಸಬಹುದು ಅಥವಾ
ಚಲನ್ ಪ್ರತಿಯ ಪ್ರಿಂಟ್ ತೆಗೆದು SBI ಬ್ಯಾಂಕ್ ನಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 21, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 21, 2020
ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ : ಅಕ್ಟೋಬರ್ 28, 2020

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.