ಪೊಲೀಸ್ ಇಲಾಖೆ ನೇಮಕಾತಿ 2020 | ಪೊಲೀಸ್ ಇಲಾಖೆ ಯಿಂದ ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆ :
ಪ್ರಯೋಗಾಲಯ ಸಹಾಯಕರು (ಪೋಟೋಗ್ರಫಿ)
ಇ.ಇ.ಜಿ ತಂತ್ರಜ್ಞರು
ಪ್ರಯೋಗಾಲಯ ಸೇವಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಪ್ರಯೋಗಾಲಯ ಸಹಾಯಕರು | 01 ಹುದ್ದೆ | ರೂ. 21,400 – 42,000 |
ಇ.ಇ.ಜಿ ತಂತ್ರಜ್ಞರು | 07 ಹುದ್ದೆ | ರೂ. 27,650 – 52,650 |
ಪ್ರಯೋಗಾಲಯ ಸೇವಕರು | 37 ಹುದ್ದೆ | ರೂ. 18,600 – 32,600 |
ವಯೋಮಾನ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯೋಮಾನ ನಿಗದಿಪಡಿಸಲಾಗಿದೆ. ಹಾಗೂ
ಸಾಮಾನ್ಯ ವರ್ಗ – ಗರಿಷ್ಠ 35 ವರ್ಷ
2ಎ, 2ಬಿ, 3ಎ, 3ಬಿ – ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 – ಗರಿಷ್ಠ 40 ವರ್ಷ
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಪ್ರಯೋಗಾಲಯ ಸಹಾಯಕರ ಹುದ್ದೆಗೆ ಸಿನಿಮಾಟೋಗ್ರಫಿಯಲ್ಲಿ ಅಥವಾ ಪೋಟೋಗ್ರಫಿಯಲ್ಲಿ ಡಿಪ್ಲೊಮಾ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
• ಇ.ಇ.ಜಿ ತಂತ್ರಜ್ಞರು ಹುದ್ದೆಗೆ ವಿಜ್ಞಾನ ಪದವಿ ಹೊಂದಿರಬೇಕು. ಇ.ಇ.ಜಿ ತಾಂತ್ರಿಕ ಕೋರ್ಸ್/ ಮೆಡಿಕಲ್ ಲ್ಯಾಬ್ರೆಟರಿ ಟೆಕ್ ಕೋರ್ಸ್ ನಲ್ಲಿ ಡಿಪ್ಲೊಮಾ ಪದವಿ ಹೊಂದಿರಬೇಕು.
• ಪ್ರಯೋಗಾಲಯ ಸೇವಕರ ಹುದ್ದೆಗೆ ಪಿಯುಸಿ ಅಥವಾ 10+2 ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು
ಉದ್ಯೋಗ ಮಾಹಿತಿ : ಗ್ರೂಪ್ ಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ :
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು
ಪೊಲೀಸ್ ಇಲಾಖೆ ಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ www.ksp.gov.in ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ – ರೂ. 250
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 – ರೂ. 100
ಶುಲ್ಕ ಪಾವತಿಸುವ ವಿಧಾನ :
ನಿಗದಿತ ಶುಲ್ಕವನ್ನು ನಗದು ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 25, 2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 27, 2020
ಅಧಿಸೂಚನೆ : Click Here
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.