ಉತ್ತರ ಕನ್ನಡ ಜಿಲ್ಲೆಯಲ್ಲಿ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ 2024 – Uttara Kannada Pourakarmika Recruitment 2024

Uttara Kannada Pourakarmika Recruitment 2024 : ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Uttara Kannada Pourakarmika Recruitment 2024 : Details of Vacancies

ಹುದ್ದೆ : ಪೌರಕಾರ್ಮಿಕರು

ಕರ್ತವ್ಯ ಸ್ಥಳ : ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಶಿರಸಿ, ದಾಂಡೇಲಿ ನಗರಸಭೆ, ಭಟ್ಕಳ, ಕುಮಟಾ, ಅಂಕೋಲಾ, ಹಳಿಯಾಳ ಪುರಸಭೆ, ಹೊನ್ನಾವರ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಜಾಲಿ, ಮಂಕಿ ಪಟ್ಟಣ ಪಂಚಾಯಿತಿಗಳಲ್ಲಿ ಹುದ್ದೆಗಳು ಖಾಲಿ ಇದೆ.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ 2024 – Uttara Kannada Pourakarmika Recruitment 2024

ಅರ್ಹತೆಗಳು : ಈ ಹುದ್ದೆಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ನಗರಸಭೆ/ ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಹಾಲಿ ನೇರಪಾವತಿ ಆಧಾರದಲ್ಲಿ 2 ವರ್ಷಕ್ಕಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಆದ್ಯತೆ ನೀಡಲಾಗುವುದು.

ಉದ್ಯೋಗ ಮಾಹಿತಿ : ಚಿತ್ರದುರ್ಗ ಜಿಲ್ಲೆಯಲ್ಲಿ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ 2024

ವಯೋಮಾನ : ಅಧಿಸೂಚನೆ ಜಾರಿಗೆ ಬಂದ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 55 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 46,675 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಹುದ್ದೆ ಖಾಲಿ ಇರುವ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿ ಕಛೇರಿಗೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಹುದ್ದೆ ಖಾಲಿ ಇರುವ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ :
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ರೂ. 600
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಹುದ್ದೆ ಖಾಲಿ ಇರುವ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 15, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 16, 2024

Uttara Kannada Pourakarmika Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment