IOCL Apprentice Recruitment 2025 : ಭಾರತೀಯ ತೈಲ ನಿಗಮದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
IOCL Apprentice Recruitment 2025 : Details of Vacancies
ಹುದ್ದೆ : ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಗ್ರ್ಯಾಜುಯೇಟ್ ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 200 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಟ್ರೇಡ್ ಅಪ್ರೆಂಟಿಸ್ | 55 |
ಟೆಕ್ನಿಷಿಯನ್ ಅಪ್ರೆಂಟಿಸ್ | 25 |
ಗ್ರ್ಯಾಜುಯೇಟ್ ಅಪ್ರೆಂಟಿಸ್ | 120 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಟ್ರೇಡ್ ಅಪ್ರೆಂಟಿಸ್ – 10ನೇ ತರಗತಿ ಜೊತೆಗೆ 2 ವರ್ಷಗಳ ಐಟಿಐ ಅರ್ಹತೆ ಹೊಂದಿರಬೇಕು.
• ಟೆಕ್ನಿಷಿಯನ್ ಅಪ್ರೆಂಟಿಸ್ – 3 ವರ್ಷಗಳ ಡಿಪ್ಲೊಮಾ (ಇಂಜಿನಿಯರಿಂಗ್) ಅರ್ಹತೆ ಹೊಂದಿರಬೇಕು.
• ಗ್ರ್ಯಾಜುಯೇಟ್ ಅಪ್ರೆಂಟಿಸ್ – ಪದವಿ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2025
ವಯೋಮಾನ : ದಿನಾಂಕ 31/01/2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ
ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 17, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 16, 2025
IOCL Apprentice Recruitment 2025 : Important Links
NOTIFICATION | CLICK HERE |
APPLY ONLINE (Trade Apprentice) | CLICK HERE |
APPLY ONLINE (Graduate/Technician Apprentice) | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.