ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2025 – BCC Bank Recruitment 2025

BCC Bank Recruitment 2025

BCC Bank Recruitment 2025 : ದಿ ಬೆಂಗಳೂರು ಸಿಟಿ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು ಇದರಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹಾಗೂ ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BCC Bank Recruitment 2025 : Details of Vacancies

ಹುದ್ದೆ :

ಕಿರಿಯ ಸಹಾಯಕರು, ಅಟೆಂಡರ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 74 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕಿರಿಯ ಸಹಾಯಕರು62
ಅಟೆಂಡರ್12

ಶೈಕ್ಷಣಿಕ ಅರ್ಹತೆ :

• ಕಿರಿಯ ಸಹಾಯಕರು – ಪದವಿ.
• ಅಟೆಂಡರ್ – ಎಸ್.ಎಸ್.ಎಲ್.ಸಿ.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ FDA ಹುದ್ದೆಗಳ ನೇಮಕಾತಿ 2025

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಹಿಂದುಳಿದ ಜಾತಿ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಇತರೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ವೇತನ :

ಹುದ್ದೆವೇತನ
ಕಿರಿಯ ಸಹಾಯಕರುರೂ. 61,300 – 1,12,900
ಅಟೆಂಡರ್ರೂ. 44,425 – 83,700

ಆಯ್ಕೆ ವಿಧಾನ :

ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

ಕಿರಿಯ ಸಹಾಯಕರು –

• ಪ.ಜಾತಿ, ಪ. ಪಂ, ಪ್ರ1, ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 750
• ಇತರೆ ಅಭ್ಯರ್ಥಿಗಳು – ರೂ. 1000

ಅಟೆಂಡರ್ –

• ಪ.ಜಾತಿ, ಪ. ಪಂ, ಪ್ರ1, ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 600
• ಇತರೆ ಅಭ್ಯರ್ಥಿಗಳು – ರೂ. 800

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 20, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 10, 2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 10, 2025

BCC Bank Recruitment 2025 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment