
SSC Sub Inspector Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಸಬ್ ಇನ್ಸ್ಪೆಕ್ಟರ್ (ಎಕ್ಸಿಕ್ಯೂಟಿವ್), ಸಬ್ ಇನ್ಸ್ಪೆಕ್ಟರ್ (ಜಿಡಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SSC Sub Inspector Recruitment 2025 : Details of Vacancies
ಹುದ್ದೆ :
ಸಬ್ ಇನ್ಸ್ಪೆಕ್ಟರ್ (ಎಕ್ಸಿಕ್ಯೂಟಿವ್), ಸಬ್ ಇನ್ಸ್ಪೆಕ್ಟರ್ (ಜಿಡಿ)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 3,073 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಸಬ್ ಇನ್ಸ್ಪೆಕ್ಟರ್ (ಎಕ್ಸಿಕ್ಯೂಟಿವ್) | 212 |
| ಸಬ್ ಇನ್ಸ್ಪೆಕ್ಟರ್ (ಜಿಡಿ) | 2861 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ಉದ್ಯೋಗ ಮಾಹಿತಿ : ಎಸ್ಎಸ್ಸಿ ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳ ನೇಮಕಾತಿ 2025
ವಯೋಮಿತಿ :
ದಿನಾಂಕ 01-08-2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ರಿಂದ ರೂ. 1,12,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ
ಆಯ್ಕೆ ವಿಧಾನ :
• ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE)
• ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ (PST)
• ಫಿಸಿಕಲ್ ಎಂಡ್ಯುರೆಸ್ಸ್ (PET)
• ವೈದ್ಯಕೀಯ ಪರೀಕ್ಷೆ
• ದಾಖಲೆಗಳ ಪರಿಶೀಲನೆ

ಉದ್ಯೋಗ ಮಾಹಿತಿ : ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025
ಪರೀಕ್ಷಾ ಕೇಂದ್ರಗಳು :
ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳಿಗೆ – ರೂ. 100
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 26, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 16, 2025
• ಆನ್ಲೈನ್ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 17, 2025
• ಕಂಪ್ಯೂಟರ್ ಆಧಾರಿತ ಪರೀಕ್ಷೆ : ನವೆಂಬರ್ – ಡಿಸೆಂಬರ್, 2025
SSC Sub Inspector Recruitment 2024 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.