
HESCOM Apprentice Recruitment 2026 : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
HESCOM Apprentice Recruitment 2026 : Details of Vacancies
ಹುದ್ದೆ :
ಅಪ್ರೆಂಟಿಸ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 388 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಎರಡು ವರ್ಷದ ಐ.ಟಿ.ಐ (ಇಲೆಕ್ಟ್ರೀಶಿಯನ್) ವೃತ್ತಿಯಲ್ಲಿ ಉತ್ತೀರ್ಣರಾಗಿ NCVT/SCVT – Provisional National Trade Certificate ಅಂಕ ಪಟ್ಟಿಯನ್ನು ಹೊಂದಿರಬೇಕು.
ಉದ್ಯೋಗ ಮಾಹಿತಿ : ನಿಮ್ಹಾನ್ಸ್ ಗ್ರೂಪ್-ಬಿ & ಗ್ರೂಪ್-ಸಿ ಹುದ್ದೆಗಳ ನೇಮಕಾತಿ 2026
ವಯೋಮಾನ :
ದಿನಾಂಕ 09/03/2026ಕ್ಕೆ ಅಭ್ಯರ್ಥಿಗಳು ಗರಿಷ್ಠ 25 ವರ್ಷ ಮೀರಿರಬಾರದು.
• ಪ.ಜಾತಿ/ ಪ.ಪಂಗಡದ ಅಭ್ಯರ್ಥಿಗಳಿಗೆ – ಗರಿಷ್ಠ 30 ವರ್ಷ
ಶಿಶಿಕ್ಷು ವೇತನ :
ಅಭ್ಯರ್ಥಿಗಳಿಗೆ ಮಾಸಿಕ ರೂ. 9,600/- ಶಿಶಿಕ್ಷು ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಹಾರ್ಡ್ ಪ್ರತಿಯನ್ನು ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಹಂತ 5 : ಕೊನೆಯದಾಗಿ, ಅರ್ಜಿ ಶುಲ್ಕ ಪಾವತಿಸಿ, ಅಧಿಸೂಚನೆ ನೀಡಲಾಗಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಈ ಕೆಳಗೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಶುಲ್ಕ :
• ಸಾಮಾನ್ಯ ಅಭ್ಯರ್ಥಿಗಳು – ರೂ. 100
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು – ರೂ. 50
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ನಿಗದಿತ ಶುಲ್ಕದ ಪೊಸ್ಟಲ್ ಆರ್ಡರನ್ನು “ಆರ್ಥಿಕ ಸಲಹೆಗಾರರು, ಹುವಿಸಕಂನಿ, ಹುಬ್ಬಳ್ಳಿ” ಇವರ ಹೆಸರಿನಲ್ಲಿ ಖರೀದಿಸಿ ಅರ್ಜಿಯೊಂದಿಗೆ ಲಗತ್ತಿಸಿ ಕಛೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯನಿರ್ವಾಹಕ ಅಭಿಯಂತರರು(ವಿ), ಕೈಗಾರಿಕಾ ತರಬೇತಿ ಕೇಂದ್ರ, (ITC), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ವಿದ್ಯುತ್‌ನಗರ, ಕಾರವಾರ ರಸ್ತೆ, ಹುಬ್ಬಳ್ಳಿ-580024
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 11, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 02, 2026
• ಹಾರ್ಡಪ್ರತಿಯನ್ನು ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 09, 2026
HESCOM Apprentice Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
| Official Website | hescom.karnataka.gov.in |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.