Taluka Legal Service Committee TLSC Gadag Recruitment 2026 : ಗದಗ ಜಿಲ್ಲೆಯ ತಾಲೂಕು ಕಾನೂನು ಸೇವಾ ಸಮಿತಿ, ಲಕ್ಷ್ಮೇಶ್ವರ ಇದರಲ್ಲಿ ಅಗತ್ಯವಿರುವ ಕ್ಲರ್ಕ್ ಕಂ ಟೈಪಿಸ್ಟ್ ಹಾಗೂ ದಲಾಯತ್ (ಆಫೀಸ್ ಪಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Taluka Legal Service Committee TLSC Gadag Recruitment 2026 : Details of Vacancies
ಹುದ್ದೆ :
ಕ್ಲರ್ಕ್ ಕಂ ಟೈಪಿಸ್ಟ್, ದಲಾಯತ್ (ಆಫೀಸ್ ಪಿಯೋನ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಲಕ್ಷ್ಮೇಶ್ವರ, ಗದಗ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಕ್ಲರ್ಕ್ ಕಂ ಟೈಪಿಸ್ಟ್ | 1 |
| ದಲಾಯತ್ (ಆಫೀಸ್ ಪಿಯೋನ್) | 1 |
ಶೈಕ್ಷಣಿಕ ಅರ್ಹತೆ :
ಕ್ಲರ್ಕ್ ಕಂ ಟೈಪಿಸ್ಟ್ –
ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಪರೀಕ್ಷೆ (ಜೂನಿಯರ್/ ಸೀನಿಯರ್) ತೇರ್ಗಡೆಯಾಗಿರಬೇಕು.
ದಲಾಯತ್ (ಆಫೀಸ್ ಪಿಯೋನ್) –
ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
ಉದ್ಯೋಗ ಮಾಹಿತಿ : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ 2026
ಆಯ್ಕೆ ವಿಧಾನ :
ಕ್ಲರ್ಕ್ ಕಂ ಟೈಪಿಸ್ಟ್
• ಟೈಪಿಂಗ್ ಟೆಸ್ಟ್
• ಕಂಪ್ಯೂಟರ್ ಬೇಸಿಕ್ ನಾಲೆಜ್ಡ್ ಟೆಸ್ಟ್
• ಸಂದರ್ಶನ
ದಲಾಯತ್ (ಆಫೀಸ್ ಪಿಯೋನ್) –
• ರೈಟಿಂಗ್ ಸ್ಕಿಲ್ ಟೆಸ್ಟ್
• ಸಂದರ್ಶನ
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿಗಳು, ತಾಲೂಕಾ ಕಾನೂನು ಸೇವಾ ಸಮಿತಿ, ನ್ಯಾಯಾಲಯದ ಸಂಕೀರ್ಣ, ಲಕ್ಷ್ಮೇಶ್ವರ, ಗದಗ
ನಿಗದಿತ ಅರ್ಜಿ ಶುಲ್ಕದ ವಿವರ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 12, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 21, 2026
Taluka Legal Service Committee TLSC Gadag Recruitment 2026 : Important Links
| NOTIFICATION | CLICK HERE |
| APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.