
RRC Western Railway Recruitment 2026 : ವೆಸ್ಟರ್ನ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RRC Western Railway Recruitment 2026 : Details of Vacancies
ಹುದ್ದೆ :
ಅಪ್ರೆಂಟಿಸ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 5349 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಸರ್ಟಿಫಿಕೇಟ್ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಉದ್ಯೋಗ ಮಾಹಿತಿ : ಆಫೀಸ್ ಅಸಿಸ್ಟಂಟ್, ಸೂಪರ್ವೈಸರ್ ಹುದ್ದೆಗಳ ನೇಮಕಾತಿ 2026
ವಯೋಮಾನ :
ದಿನಾಂಕ 23 ಮಾರ್ಚ್ 2026ಕ್ಕೆ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 15 ವರ್ಷ
• ಗರಿಷ್ಠ 24 ವರ್ಷ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ :
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. (ಯಾವುದೇ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಇರುವುದಿಲ್ಲ).
ಇತರೆ ಮಾಹಿತಿ :
ವೆಸ್ಟರ್ನ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್, ಟರ್ನರ್, ಮಶಿನಿಸ್ಟ್, ಕಾರ್ಪೆಂಟರ್, ಪೇಂಟರ್ (ಜನರಲ್), ಡಿಸೇಲ್ ಮೆಕ್ಯಾನಿಕ್, ಮೆಕ್ಯಾನಿಕ್ (ಮೋಟಾರ್ ವೆಹಿಕಲ್), ಪ್ರೋಗ್ರಾಮಿಂಗ್ & ಸಿಸ್ಟಮ್ ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್, ಇಲೆಕ್ಟ್ರಿಷಿಯನ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ವಯರ್ ಮ್ಯಾನ್, ಮೆಕ್ಯಾನಿಕ್ ರೆಪ್ರಿಜಿರೇಶನ್ & ಎಸಿ, ಪೈಪ್ ಪಿಟ್ಟರ್, ಪ್ಲಂಬರ್, ಡ್ರಾಪ್ಟ್ಸಮ್ಯಾನ್ (ಸಿವಿಲ್), ಸ್ಟೇನೋಗ್ರಾಫರ್ (ಇಂಗ್ಲೀಷ್), ಫೋರ್ಜರ್ ಮತ್ತು ಹೀಟ್ ಟ್ರೀಟರ್, ಮಶಿನಿಷ್ಟ್ (ಗ್ರೈಂಡರ್) ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ.
ಉದ್ಯೋಗ ಮಾಹಿತಿ : ಆರ್‌ಬಿಐ ಅಸಿಸ್ಟೆಂಟ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
• ಉಳಿದ ಅಭ್ಯರ್ಥಿಗಳಿಗೆ – ರೂ. 100
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಐ, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರುವರಿ 21, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮಾರ್ಚ್ 23, 2026
RRC Western Railway Apprentice Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE ಫೆಬ್ರುವರಿ 21 ರಿಂದ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.