
Chamarajanagara District Court Recruitment 2026 : ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಸೇವಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Chamarajanagara District Court Recruitment 2026: Details of Vacancies
ಹುದ್ದೆ :
ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಸೇವಕರು.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 25 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಶೀಘ್ರಲಿಪಿಗಾರರು ಗ್ರೇಡ್ 3 | 2 |
| ಬೆರಳಚ್ಚುಗಾರರು | 6 |
| ಬೆರಳಚ್ಚು ನಕಲುಗಾರರು | 4 |
| ಸೇವಕರು | 13 |
ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3 –
ದ್ವಿತೀಯ ಪಿಯುಸಿ ಅಥವಾ ಯಾವುದೇ 3 ವರ್ಷದ ಡಿಪ್ಲೊಮಾ ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಮತ್ತು ಶೀಘ್ರಲಿಪಿ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
ಬೆರಳಚ್ಚುಗಾರರು –
ದ್ವಿತೀಯ ಪಿಯುಸಿ ಅಥವಾ ಯಾವುದೇ 3 ವರ್ಷದ ಡಿಪ್ಲೊಮಾ ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
ಬೆರಳಚ್ಚು ನಕಲುಗಾರರು –
ದ್ವಿತೀಯ ಪಿಯುಸಿ ಅಥವಾ ಯಾವುದೇ 3 ವರ್ಷದ ಡಿಪ್ಲೊಮಾ ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
ಸೇವಕ –
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
ಉದ್ಯೋಗ ಮಾಹಿತಿ : ಐಡಿಬಿಐ ಬ್ಯಾಂಕಿನಿಂದ ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ನೇಮಕಾತಿ 2026
ವಯೋಮಾನ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35+5 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38+5 ವರ್ಷ
• ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40+5 ವರ್ಷ
ವೇತನ :
| ಹುದ್ದೆ | ವೇತನ |
| ಶೀಘ್ರಲಿಪಿಗಾರರು ಗ್ರೇಡ್ 3 | ರೂ. 44,425 – ರೂ. 83,700 |
| ಬೆರಳಚ್ಚುಗಾರರು | ರೂ. 34,100 – ರೂ. 67,600 |
| ಬೆರಳಚ್ಚು ನಕಲುಗಾರರು | ರೂ. 34,100 – ರೂ. 67,600 |
| ಸೇವಕರು | ರೂ. 27,000 – ರೂ. 46,675 |
ಆಯ್ಕೆ ವಿಧಾನ :
- ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ನಿಗದಿಪಡಿಸಲಾದ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನ ನಡೆಸಲಾಗುವುದು.
- ಸೇವಕ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ 1:10 ಅನುಪಾತದಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 13, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 13, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 16, 2026
Chamarajanagar Court Recruitment 2026 : Important Links
| NOTIFICATION (STENOGRAPHER) | CLICK HERE |
| NOTIFICATION (TYPIST) | CLICK HERE |
| NOTIFICATION (TYPIST COPYIST) | CLICK HERE |
| NOTIFICATION (PEON) | CLICK HERE |
| APPLY ONLINE | CLICK HERE ಮಾರ್ಚ್ 13 ರಿಂದ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.