
DUDC Davanagere Recruitment 2026 : ದಾವಣಗೆರೆ ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ಹರಿಹರ ನಗರಸಭೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DUDC Davanagere Recruitment 2026 : Details of Vacancies
ಹುದ್ದೆ :
ಪೌರಕಾರ್ಮಿಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹರಿಹರ ನಗರಸಭೆ ದಾವಣಗೆರೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 04 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು :
ನೇರಪಾವತಿ/ ದಿನಗೂಲಿ ಕ್ಷೇಮಾಭಿವೃದ್ಧಿ ಅಧಿನಿಯಮ/ ಸಮಾನ ಕೆಲಸಕ್ಕೆ ಸಮಾನ ವೇತನದಡಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ಉದ್ಯೋಗ ಮಾಹಿತಿ : ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಮತ್ತು ಪಿಯೋನ್ ಹುದ್ದೆಗಳ ನೇಮಕಾತಿ 2026
ವಯೋಮಿತಿ :
ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಗರಿಷ್ಠ 55 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 46,675 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಯಾ ನಗರ ಸ್ಥಳೀಯ ಸಂಸ್ಥೆಗಳ ಕಛೇರಿಯಿಂದ ನಿಗದಿತ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಅಧ್ಯಕ್ಷರು, ಪೌರಕಾರ್ಮಿಕರ ನೇರ ನೇಮಕಾತಿ (ವಿಶೇಷ) ಆಯ್ಕೆ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು, ದಾವಣಗೆರೆ ಜಿಲ್ಲೆ ರವರ ಹೆಸರಿಗೆ, ಹರಿಹರ ನಗರಸಭೆ ಪೌರಾಯುಕ್ತರ ಮುಖಾಂತರ ಸಲ್ಲಿಸುವುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 11, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 10, 2026
District Urban Development Cell Davanagere Recruitment 2026 : Important Links
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.