
Mysore District Court Recruitment 2026 : ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್-3, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು, ಸೇವಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Mysore District Court Recruitment 2026 : Details of Vacancies
ಹುದ್ದೆ :
ಶೀಘ್ರಲಿಪಿಗಾರರು ಗ್ರೇಡ್-3, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು, ಸೇವಕರು.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 93 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಶೀಘ್ರಲಿಪಿಗಾರರು ಗ್ರೇಡ್-3 | 4 |
| ಬೆರಳಚ್ಚು ನಕಲುಗಾರರು | 3 |
| ಆದೇಶ ಜಾರಿಕಾರ | 11 |
| ಸೇವಕರು | 75 |
ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3 –
• ಪದವಿಪೂರ್ವ ಶಿಕ್ಷಣ ಇಲಾಖೆಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು (Typewriting Senior) ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (Shorthand Senior) ಪರೀಕ್ಷೆಯಲ್ಲಿ ಅಥವಾ ಮೂರು ವರ್ಷಗಳ ಡಿಪ್ಲೊಮೊ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಬೆರಳಚ್ಚು ನಕಲುಗಾರರು –
• ಪದವಿಪೂರ್ವ ಶಿಕ್ಷಣ ಇಲಾಖೆಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ಶ್ರೇಣಿ ಬೆರಳಚ್ಚು (Typewriting Junior) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಆದೇಶ ಜಾರಿಕಾರರು & ಸೇವಕರು –
• 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ಗ್ರೂಪ್-ಡಿ ಹುದ್ದೆಗಳ ನೇಮಕಾತಿ 2026
ವಯೋಮಾನ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ವೇತನ :
| ಹುದ್ದೆ | ವೇತನ |
| ಶೀಘ್ರಲಿಪಿಗಾರರು ಗ್ರೇಡ್-3 | ರೂ. 44,425 – ರೂ. 83,700 |
| ಬೆರಳಚ್ಚು ನಕಲುಗಾರರು | ರೂ. 34,100 – ರೂ. 67,600 |
| ಆದೇಶ ಜಾರಿಕಾರ | ರೂ. 31,775 – ರೂ. 61,300 |
| ಸೇವಕರು | ರೂ. 27,000 – ರೂ. 46,675 |
ಆಯ್ಕೆ ವಿಧಾನ :
ಶೀಘ್ರಲಿಪಿಗಾರ, ಬೆರಳಚ್ಚು ನಕಲುಗಾರ –
ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಅಂಕಗಳ ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಆದೇಶ ಜಾರಿಕಾರ, ಸೇವಕರು –
10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಕರ್ನಾಟಕ ಕೃಷಿ ಇಲಾಖೆ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಜಿಲ್ಲಾ ನ್ಯಾಯಾಲಯ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
ಶೀಘ್ರಲಿಪಿಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ –
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 300
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 150
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಸೇವಕರು –
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 100
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 28, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 31, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 02, 2026
Mysuru District Court Recruitment 2026 : Important Links
| NOTIFICATION (STENOGRAPHER) | CLICK HERE |
| NOTIFICATION (TYPIST COPYIST) | CLICK HERE |
| NOTIFICATION (PROCESS SERVER) | CLICK HERE |
| NOTIFICATION (PEON) | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.