ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2026 – SECR Apprentice Recruitment 2026

SECR Apprentice Recruitment 2026

SECR Apprentice Recruitment 2026 : ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SECR Apprentice Recruitment 2026 : Details of Vacancies

ಹುದ್ದೆ :

ಅಪ್ರೆಂಟಿಸ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 1644 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಕೋರ್ಸ್ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು

ಉದ್ಯೋಗ ಮಾಹಿತಿ : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ನೇಮಕಾತಿ 2026

ವಯೋಮಾನ :

ದಿನಾಂಕ 05 ಮೇ 2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಕನಿಷ್ಠ 15 ವರ್ಷ
• ಗರಿಷ್ಠ 24 ವರ್ಷ

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಮಾಜಿ ಸೈನಿಕ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ :

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಇತರೆ ಮಾಹಿತಿ :

ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ವೆಲ್ಡರ್, ಟರ್ನರ್, ಫಿಟ್ಟರ್, ಇಲೆಕ್ಟ್ರಿಷಿಯನ್, ಸ್ಟೆನೋಗ್ರಾಫರ್ (ಹಿಂದಿ), ಸ್ಟೆನೋಗ್ರಾಫರ್ (ಇಂಗ್ಲೀಷ್), ಹೆಲ್ತ್ ಸ್ಯಾನಿಟರಿ ಇನ್ಸ್‌ಪೆಕ್ಟರ್, COPA, ಮಶಿನಿಸ್ಟ್, ಮೆಕ್ಯಾನಿಕ್ ಡಿಸೇಲ್, ಮೆಕ್ಯಾನಿಕ್, ಬ್ಲಾಕಸ್ಮಿತ್, ಹ್ಯಾಮರ್ಮ್ಯಾನ್, ಮೇಸನ್, ಫೈಪ್ ಲೈನ್ ಫಿಟ್ಟರ್, ಕಾರ್ಪೆಂಟರ್, ಪೇಂಟರ್, ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 05, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 04, 2026

South East Central Railway Apprentice Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment