
GESCOM Apprentice Recruitment 2026 : ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
GESCOM Apprentice Recruitment 2026 : Details of Vacancies
ಹುದ್ದೆ :
ಇಂಜಿನಿಯರಿಂಗ್ ಪದವೀಧರ/ ಡಿಪ್ಲೊಮಾ ಅಪ್ರೆಂಟಿಸ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 275 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ | 175 |
| ಡಿಪ್ಲೊಮಾ ಅಪ್ರೆಂಟಿಸ್ | 100 |
ಶೈಕ್ಷಣಿಕ ಅರ್ಹತೆ :
ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ –
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಸಂಸ್ಥೆಯಿಂದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.
ಡಿಪ್ಲೊಮಾ ಅಪ್ರೆಂಟಿಸ್ –
ಕರ್ನಾಟಕದ ಪಾಲಿಟೆಕ್ನಿಕ್ ಕಾಲೇಜು/ ಸಂಸ್ಥೆಯಿಂದ 3 ವರ್ಷಗಳ ಡಿಪ್ಲೊಮಾ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನೇಮಕಾತಿ 2026
ವಯೋಮಾನ :
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಶಿಶಿಕ್ಷು ವೇತನ :
| ಹುದ್ದೆ | ಶಿಶಿಕ್ಷು ವೇತನ |
| ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ | ರೂ. 9,000/- |
| ಡಿಪ್ಲೊಮಾ ಅಪ್ರೆಂಟಿಸ್ | ರೂ. 8,000/- |
ಆಯ್ಕೆ ವಿಧಾನ :
ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ :
ಪ್ರಧಾನ ವ್ಯವಸ್ಥಾಪಕರು (ಆ ಮತ್ತು ಮಾ.ಸಂ.ಅ) ನಿಗಮ ಕಛೇರಿ ಗು.ವಿ.ಸ.ಕಂ.ನಿ., ಸ್ಟೇಷನ್ ರೋಡ್ ಕಲಬುರಗಿ, 585102
ಅರ್ಜಿ ಶುಲ್ಕ :
ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 18, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 05, 2026
GESCOM Apprenticeship 2026 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.