
KSLSA Driver Recruitment 2026 : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇಲ್ಲಿ ಖಾಲಿ ಇರುವ ವಾಹನ ಚಾಲಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KSLSA Driver Recruitment 2026 : Details of Vacancies
ಹುದ್ದೆ :
ವಾಹನ ಚಾಲಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಲಘು ವಾಹನ ಚಾಲನಾ ಜೊತೆಗೆ ಭಾರಿ ಪ್ರಮಾಣದ ಮೋಟಾರು ವಾಹನ ಚಾಲನೆ ಮಾಡುವ ಚಾಲನಾ ಪರವಾನಿಗೆಯನ್ನು ಮತ್ತು ವಾಹನ ಚಾಲನೆಯಲ್ಲಿ ಅನುಭವವನ್ನು ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ 2026
ವಯೋಮಿತಿ :
ದಿನಾಂಕ 27/05/2026ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 40 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳು – ಗರಿಷ್ಠ 45 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 34,100 ರಿಂದ ರೂ. 67,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ವಾಹನ ಚಾಲಕ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಡಿಸಿಸಿ ಬ್ಯಾಂಕ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಪ್ರಾಧಿಕಾರದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯದೇಗುಲ, ಮೊದಲನೇ ಮಹಡಿ, ಹೆಚ್.ಸಿದ್ದಯ್ಯ ರಸ್ತೆ, ಬೆಂಗಳೂರು – 560027
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿಗಳು – ರೂ. 500/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು – ರೂ. 250/-
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಯುಪಿಐ/ ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್ ಪಾವತಿ ಗೇಟ್ ವೇ ಮೂಲಕ ಭಾರತೀಯ ಸ್ಟೇಟ್ ಬ್ಯಾಂಕ್, ಎಸ್.ಎಮ್.ಇ. ಶಾಖೆ, ವಿಲ್ಸನ್ ಗಾರ್ಡನ್, ಬೆಂಗಳೂರು ಇಲ್ಲಿನ ಉಳಿತಾಯ ಖಾತೆ ಸಂಖ್ಯೆ: 64071587420, IFSC: SBIN0004932 ಗೆ ಪಾವತಿಸತಕ್ಕದ್ದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 27, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 25, 2026
Karnataka State Legal Service Authority Recruitment 2026 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.