
BSNL General Manager Recruitment 2026 : ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನಿಂದ ಒಪ್ಪಂದದ ಆಧಾರದ ಮೇಲೆ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
BSNL General Manager Recruitment 2026 : Details of Vacancies
ಹುದ್ದೆ :
ಜನರಲ್ ಮ್ಯಾನೇಜರ್ (ಫೈನಾನ್ಸ್ & ಅಕೌಂಟ್ಸ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 15 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಂಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್, ಎಂಬಿಎ (ಫೈನಾನ್ಸ್), ಪಿಜಿ ಡಿಪ್ಲೊಮಾ ಇನ್ ಮ್ಯಾನೇಜ್ಮೆಂಟ್ (ಫೈನಾನ್ಸ್) ಪದವಿಗಳಲ್ಲಿ ಯಾವುದಾದರೊಂದು ಪದವಿ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಬಿಎಸ್ಎನ್ಎಲ್ ನಿಂದ ಜ್ಯೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ನೇಮಕಾತಿ 2026
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಗರಿಷ್ಠ 50 ವರ್ಷ
ಅನುಭವ :
ಅಭ್ಯರ್ಥಿಗಳು ಹುದ್ದೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 2,25,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
• ಶಾರ್ಟ್ ಲಿಸ್ಟ್
• ಗ್ರೂಪ್ ಡಿಸ್ಕಷನ್
• ಪ್ರೆಸೆಂಟೇಷನ್
• ಇಂಟರ್ವ್ಯೂ
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ನಿಗಮವು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ನಿಗಮದ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಅಭ್ಯರ್ಥಿಗಳು ರೂ. 1,000 ಅರ್ಜಿ ಶುಲ್ಕ ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 09, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 24, 2026
BSNL General Manager Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.