
Central Bank of India Apprentice Recruitment 2026 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Central Bank of India Apprentice Recruitment 2026 : Details of Vacancies
ಹುದ್ದೆ :
ಅಪ್ರೆಂಟಿಸ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 4500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ 105 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ 2026
ವಯೋಮಾನ :
ದಿನಾಂಕ 31/05/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
- ಕನಿಷ್ಠ 20 ವರ್ಷ
- ಗರಿಷ್ಠ 28 ವರ್ಷ
ವಯೋಮಿತಿ ಸಡಿಲಿಕೆ :
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
- ಪಿಡಬ್ಲ್ಯೂಬಿಡಿ (ಯುಆರ್/ ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ
- ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
- ಪಿಡಬ್ಲ್ಯೂಬಿಡಿ (ಎಸ್ಸಿ/ ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ಆಯ್ಕೆ ವಿಧಾನ :
- ಆನ್‌ಲೈನ್ ಪರೀಕ್ಷೆ
- ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ (10ನೇ ತರಗತಿ ಅಥವಾ 12ನೇ ತರಗತಿಯಲ್ಲಿ ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿದ ಅಭ್ಯರ್ಥಿಗಳು ಭಾಷಾ ಪ್ರಾವೀಣ್ಯತೆ ಪರೀಕ್ಷೆಯಿಂದ ವಿನಾಯಿತಿ ಪಡೆಯುತ್ತಾರೆ)
- ದಾಖಲೆಗಳ ಪರಿಶೀಲನೆ.
ಆನ್‌ಲೈನ್ ಪರೀಕ್ಷೆ :
| Subjects | No. Of Questions | Maximum Marks | Duration |
| General/ Financial Awareness | 20 | 20 | – |
| Quantitative & Reasoning Aptitude | 20 | 20 | – |
| Computer Knowledge | 20 | 20 | – |
| General English | 20 | 20 | – |
| Central Bank of India Products & Services | 20 | 20 | – |
| Total | 100 | 100 | 60 Minutes |
ಸ್ಟೈಫಂಡ್ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000/- ಸ್ಟೈಫಂಡ್ ನೀಡಲಾಗುತ್ತದೆ.
ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
- ಜನರಲ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು (ಪುರುಷ) – ರೂ. 944/-
- ಜನರಲ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು (ಮಹಿಳೆ) – ರೂ. 708/-
- ಪ.ಜಾತಿ, ಪ.ಪಂಗಡ ಅಭ್ಯರ್ಥಿಗಳು (ಪುರುಷ/ ಮಹಿಳೆ) – ರೂ. 236/-
- ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 236/-
- ಟ್ರಾನ್ಸ್ ಜೆಂಡರ್ ಅಭ್ಯರ್ಥಿಗಳು – ರೂ. 236/-
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 12, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 22, 2026
• ಆನ್‌ಲೈನ್ ಪರೀಕ್ಷೆ ನಡೆಯುವ ದಿನಾಂಕ (ತಾತ್ಕಾಲಿಕ) : ಜುಲೈ ಮೊದಲನೇ ವಾರ
Central Bank of India Apprentice Recruitment 2026 : Important Links
| NOTIFICATION | CLICK HERE |
| APPLY ONLINE (REGISTRATION NATS) | CLICK HERE |
| APPLY ONLINE (REGISTRATION BFSI SSC) | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.