ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ 2026 – KPCL Karnataka Recruitment 2026

KPCL Karnataka Recruitment 2026

KPCL Karnataka Recruitment 2026 : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಇದರ ಕಾನೂನು ವಿಷಯಗಳಿಗೆ ಸಂಬಂಧಪಟ್ಟ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KPCL Karnataka Recruitment 2026 : Details of Vacancies

ಹುದ್ದೆ :

ಸಹಾಯಕ ಕಾನೂನು ಅಧಿಕಾರಿ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ :

  • ಅಂಗೀಕೃತ ವಿಶ್ವವಿದ್ಯಾಲಯದ (ಮೂರು ಅಥವಾ ಐದು ವರ್ಷಗಳ) ಕಾನೂನು ಪದವಿಯನ್ನು ಕನಿಷ್ಠ ಶೇಕಡಾ 40 ರಷ್ಟು ಅಂಕಗಳೊಂದಿಗೆ ಪಡೆದಿರಬೇಕು.
  • ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ನೋಂದಣಿ ಪ್ರಮಾಣ ಪತ್ರ ಹೊಂದಿರಬೇಕು.

ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ 2026

ವಯೋಮಿತಿ :

ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 28 ವರ್ಷ
• ಗರಿಷ್ಠ 56 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 65,000 ಸಂಭಾವನೆ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಇಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಇಮೇಲ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಇಮೇಲ್ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಇಮೇಲ್ ವಿಳಾಸ :

kpclcontractappt@gmail.com

ನಿಗದಿತ ಅರ್ಜಿ ಶುಲ್ಕದ ವಿವರ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 12, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 22, 2026

KPCL Karnataka ALO Recruitment 2026 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment