
SBI Probationary Officer Recruitment 2026 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SBI Probationary Officer Recruitment 2026 : Details of Vacancies
ಹುದ್ದೆ :
ಪ್ರೊಬೇಷನರಿ ಆಫೀಸರ್ (PO)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 1500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಕೆಟಗರಿ | ಹುದ್ದೆಗಳ ಸಂಖ್ಯೆ |
| ರೆಗ್ಯೂಲರ್ | 1446 |
| ಬ್ಯಾಕ್ ಲಾಗ್ | 54 |
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಆದರೆ ಸಂದರ್ಶನ ಸಂದರ್ಭದಲ್ಲಿ ಅವರು 30-09-2026 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಒದಗಿಸಬೇಕು)
ಉದ್ಯೋಗ ಮಾಹಿತಿ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ನೇಮಕಾತಿ 2026
ವಯೋಮಾನ :
ದಿನಾಂಕ 01/04/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
- ಕನಿಷ್ಠ 21 ವರ್ಷ
- ಗರಿಷ್ಠ 30 ವರ್ಷ
ವಯೋಮಿತಿ ಸಡಿಲಿಕೆ :
- ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
- ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 3 ವರ್ಷ
- ಪಿಡಬ್ಲ್ಯೂಬಿಡಿ (ಯುಆರ್/ ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ
- ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
- ಪಿಡಬ್ಲ್ಯೂಬಿಡಿ (ಎಸ್ಸಿ/ ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
- ಫೇಸ್-1 – ಪ್ರಿಲಿಮಿನರಿ ಪರೀಕ್ಷೆ
- ಫೇಸ್-2 – ಮುಖ್ಯ ಪರೀಕ್ಷೆ
- ಫೇಸ್-3 – ಸೈಕೋಮೆಟ್ರಿಕ್ ಟೆಸ್ಟ್ , ಗ್ರೂಪ್ ಎಕ್ಸರ್ಸೈಜ್, ಸಂದರ್ಶನ
ಫೇಸ್-1 – ಪ್ರಿಲಿಮಿನರಿ ಪರೀಕ್ಷೆ –
| ಪರೀಕ್ಷೆಯ ಹೆಸರು | ಪ್ರಶ್ನೆಗಳ ಸಂಖ್ಯೆ | ಗರಿಷ್ಠ ಅಂಕಗಳು | ಅವಧಿ |
| ಇಂಗ್ಲೀಷ್ ಲ್ಯಾಂಗ್ವೇಜ್ | 40 | – | 20 ನಿಮಿಷ |
| ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ | 30 | – | 20 ನಿಮಿಷ |
| ರೀಸನಿಂಗ್ ಅಬಿಲಿಟಿ | 30 | – | 20 ನಿಮಿಷ |
| ಒಟ್ಟು | 100 | 100 | 1 ತಾಸು |
ಪರೀಕ್ಷಾ ಕೇಂದ್ರಗಳು – ಬೆಳಗಾವಿ, ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.
ಫೇಸ್-2 – ಮುಖ್ಯ ಪರೀಕ್ಷೆ –
| ಪರೀಕ್ಷೆಯ ಹೆಸರು | ಪ್ರಶ್ನೆಗಳ ಸಂಖ್ಯೆ | ಗರಿಷ್ಠ ಅಂಕಗಳು | ಅವಧಿ |
| ರೀಸನಿಂಗ್ & ಕಂಪ್ಯೂಟರ್ ಅಪ್ಟಿಟ್ಯೂಡ್ | 40 | 60 | 50 ನಿಮಿಷ |
| ಡೇಟಾ ಅನಾಲಿಸಿಸ್ & ಇಂಟರ್ಪ್ರಿಟೇಶನ್ | 30 | 60 | 45 ನಿಮಿಷ |
| ಜನರಲ್ ಅವೇರ್ನೆಸ್/ ಎಕಾನಮಿ/ ಬ್ಯಾಂಕಿಂಗ್ ನಾಲೇಡ್ಜ್ | 60 | 60 | 45 ನಿಮಿಷ |
| ಇಂಗ್ಲೀಷ್ ಲ್ಯಾಂಗ್ವೇಜ್ | 40 | 20 | 40 ನಿಮಿಷ |
| ಒಟ್ಟು | 170 | 200 | 3 ತಾಸು |
ಪರೀಕ್ಷಾ ಕೇಂದ್ರಗಳು – ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮೈಸೂರು.
ಉದ್ಯೋಗ ಮಾಹಿತಿ : ಕೆಎಂಎಫ್ ಶಿಮುಲ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
- ಅನ್ ರಿಸರ್ವಡ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 750
- ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 18, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 08, 2026
- ಪ್ರಿಲಿಮಿನರಿ ಪರೀಕ್ಷಾ ದಿನಾಂಕ : ಆಗಸ್ಟ್, 2026
- ಮುಖ್ಯ ಪರೀಕ್ಷಾ ದಿನಾಂಕ : ಸೆಪ್ಟೆಂಬರ್, 2026
- ಸೈಕೋಮೆಟ್ರಿಕ್ ಟೆಸ್ಟ್ ದಿನಾಂಕ : ಅಕ್ಟೋಬರ್/ ನವೆಂಬರ್, 2026
- ಸಂದರ್ಶನ & ಗ್ರೂಪ್ ಎಕ್ಸರ್ಸೈಜ್ ದಿನಾಂಕ : ಅಕ್ಟೋಬರ್/ ನವೆಂಬರ್, 2026
SBI PO Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.