
DHFWS Dharwad Recruitment 2026 : ಪಿಎಂ ಅಭೀಮ್ ಯೋಜನೆಯಡಿಯಲ್ಲಿ ಧಾರವಾಡ ಜಿಲ್ಲೆಯ ನಮ್ಮ ಕ್ಲಿನಿಕ್ ಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು, ಶುಶ್ರೂಷಣಾಧಿಕಾರಿ, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Dharwad Recruitment 2026 : Details of Vacancies
ಹುದ್ದೆ :
ವೈದ್ಯಾಧಿಕಾರಿಗಳು, ಶುಶ್ರೂಷಣಾಧಿಕಾರಿ, ಪ್ರಯೋಗಶಾಲಾ ತಂತ್ರಜ್ಞರು, ಆರೋಗ್ಯ ನಿರೀಕ್ಷಣಾಧಿಕಾರಿ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಧಾರವಾಡ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 15 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ವೈದ್ಯಾಧಿಕಾರಿಗಳು | 7 |
| ಶುಶ್ರೂಷಣಾಧಿಕಾರಿ | 2 |
| ಪ್ರಯೋಗಶಾಲಾ ತಂತ್ರಜ್ಞರು | 1 |
| ಆರೋಗ್ಯ ನಿರೀಕ್ಷಣಾಧಿಕಾರಿ | 5 |
ಶೈಕ್ಷಣಿಕ ಅರ್ಹತೆ :
ವೈದ್ಯಾಧಿಕಾರಿಗಳು –
ಎಂ.ಬಿ.ಬಿ.ಎಸ್. ಪದವಿ ಹೊಂದಿರಬೇಕು ಮತ್ತು ಕೆ.ಎಮ್.ಸಿ ನೊಂದಣಿ ಪತ್ರವನ್ನು ಹೊಂದಿರಬೇಕು.
ಶುಶ್ರೂಷಣಾಧಿಕಾರಿ –
ಬಿ.ಎಸ್ಸಿ ಇನ್ ನರ್ಸಿಂಗ್/ ಡಿಪ್ಲೊಮಾ ಇನ್ ನರ್ಸಿಂಗ್ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಸಿರಬೇಕು. ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಮಾಣಪತ್ರ ಸಲ್ಲಿಸಬೇಕು.
ಪ್ರಯೋಗಶಾಲಾ ತಂತ್ರಜ್ಞರು –
ಎಸ್.ಎಸ್.ಎಲ್.ಸಿ / ತತ್ಸಮಾನದೊಂದಿಗೆ 3 ವರ್ಷಗಳ ಪ್ಯಾರಾ ಮೆಡಿಕಲ್ ಡಿಗ್ರಿ ಇನ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿ ಅರ್ಹತೆ ಹೊಂದಿರಬೇಕು. ಪಿಯುಸಿ/ ತತ್ಸಮಾನದೊಂದಿಗೆ 2 ವರ್ಷಗಳ ಪ್ಯಾರಾ ಮೆಡಿಕಲ್ ಡಿಗ್ರಿ ಇನ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿ ಅರ್ಹತೆ ಹೊಂದಿರಬೇಕು.
ಆರೋಗ್ಯ ನಿರೀಕ್ಷಣಾಧಿಕಾರಿ –
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು. ಅಥವಾ
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೊಮಾ ಹೊಂದಿರಬೇಕು. ಅಥವಾ
ಪಿಯುಸಿ ವಿಜ್ಞಾನ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೊಮಾ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕೃಷಿ ಇಲಾಖೆಯಿಂದ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳ ನೇಮಕಾತಿ 2026
ವಯೋಮಿತಿ :
- ವೈದ್ಯಾಧಿಕಾರಿಗಳು – 65 ವರ್ಷ
- ಶುಶ್ರೂಷಣಾಧಿಕಾರಿ – 45 ವರ್ಷ
- ಪ್ರಯೋಗಶಾಲಾ ತಂತ್ರಜ್ಞರು – 40 ವರ್ಷ
- ಆರೋಗ್ಯ ನಿರೀಕ್ಷಣಾಧಿಕಾರಿ – 40 ವರ್ಷ
ಆಯ್ಕೆ ವಿಧಾನ :
ಮೆರಿಟ್ ಹಾಗೂ ರೋಸ್ಟರ್ ಅನುಗುಣವಾಗಿ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 22, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 30, 2026
DHFWS Dharwad Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.