ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 – Chikkamagaluru District Court Recruitment 2026

Chikkamagaluru District Court Recruitment 2026

Chikkamagaluru District Court Recruitment 2026 : ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಸೇವಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chikkamagaluru District Court Recruitment 2026 : Details of Vacancies

ಹುದ್ದೆ :

ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು, ಸೇವಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 61 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಶೀಘ್ರಲಿಪಿಗಾರರು ಗ್ರೇಡ್ 35
ಬೆರಳಚ್ಚುಗಾರರು6
ಬೆರಳಚ್ಚು ನಕಲುಗಾರರು1
ಆದೇಶ ಜಾರಿಕಾರರು2
ಸೇವಕರು47

ಶೈಕ್ಷಣಿಕ ಅರ್ಹತೆ :

ಶೀಘ್ರಲಿಪಿಗಾರರು ಗ್ರೇಡ್ 3 –

  • ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢದರ್ಜೆ (ಸೀನಿಯರ್ ಗ್ರೇಡ್) ಶೀಘ್ರಲಿಪಿ ಮತ್ತು ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರರು –

  • ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆ (ಸೀನಿಯರ್ ಗ್ರೇಡ್) ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರರು –

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯದರ್ಜೆ ಪರೀಕ್ಷೆ (ಜ್ಯೂನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ, ಜವಾನ ಹಾಗೂ ಚಾಲಕ ಹುದ್ದೆಗಳ ನೇಮಕಾತಿ 2026

ಆದೇಶ ಜಾರಿಕಾರರು –

  • ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ವಾಹನ ಚಾಲನಾ ಪರವಾನಗಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಸೇವಕರು –

  • ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕನ್ನಡ ಭಾಷೆಯಲ್ಲಿ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

  • ಕನಿಷ್ಠ 18 ವರ್ಷ
  • ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
  • ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ :

ಹುದ್ದೆವೇತನ
ಶೀಘ್ರಲಿಪಿಗಾರರು ಗ್ರೇಡ್ 3ರೂ. 44,425 – ರೂ. 83,700
ಬೆರಳಚ್ಚುಗಾರರುರೂ. 34,100 – ರೂ. 67,600
ಬೆರಳಚ್ಚು ನಕಲುಗಾರರುರೂ. 34,100 – ರೂ. 67,600
ಆದೇಶ ಜಾರಿಕಾರರುರೂ. 31,775 – ರೂ. 61,300
ಸೇವಕರುರೂ. 27,000 – ರೂ. 46,675

ಆಯ್ಕೆ ವಿಧಾನ :

  • ಶೀಘ್ರಲಿಪಿಗಾರರು ಹುದ್ದೆಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಕಂಪ್ಯೂಟರ್ ನಲ್ಲಿ ಅನುಲಿಪಿ ಮಾಡುವ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡುವ ಅರ್ಹತಾ (ಕೌಶಲ್ಯ) ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಆದೇಶ ಜಾರಿಕಾರ ಮತ್ತು ಸೇವಕರು ಹುದ್ದೆಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಅಂಗನವಾಡಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಜಿಲ್ಲಾ ನ್ಯಾಯಾಲಯವು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 300
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 150
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 29, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 28, 2026

Chikkamagaluru District Court Recruitment 2026 : Important Links

STENOGRAPHER NOTIFICATION CLICK HERE
TYPIST NOTIFICATIONCLICK HERE
TYPIST COPYIST NOTIFICATIONCLICK HERE
PROCESS SERVER NOTIFICATION CLICK HERE
PEON NOTIFICATION CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment