ಕರ್ನಾಟಕ ಹೈಕೋರ್ಟ್ ನೇಮಕಾತಿ 2026 – Karnataka High Court Recruitment 2026

Karnataka High Court Recruitment 2026

Karnataka High Court Recruitment 2026 : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಅಗತ್ಯವಿರುವ ದತ್ತಾಂಶ ನಮೂದು ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka High Court Recruitment 2026 : Details of Vacancies

ಹುದ್ದೆ :

ದತ್ತಾಂಶ ನಮೂದು ಸಹಾಯಕರು

ಕರ್ತವ್ಯ ಸ್ಥಳ :

ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರಿನಲ್ಲಿನ ಪ್ರಧಾನ ಪೀಠದಲ್ಲಾಗಲೀ ಅಥವಾ ಧಾರವಾಡ ಅಥವಾ ಕಲಬುರಗಿಗಳಲ್ಲಿನ ಪೀಠಗಳಲ್ಲಾಗಲೀ ನಿಯೋಜಿಸಬಹುದು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 28 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿದ ಮೂಲ ವೃಂದ 21
ಕಲ್ಯಾಣ ಕರ್ನಾಟಕ ಪ್ರದೇಶ7

ಶೈಕ್ಷಣಿಕ ಅರ್ಹತೆ :

  • ಅಭ್ಯರ್ಥಿಗಳು ಯಾವುದೇ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ವಿಜ್ಞಾನ/ ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯಗಳ ಪದವಿಯಲ್ಲಿ, ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55 ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 50 ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು. ಮತ್ತು
  • ಆಂಗ್ಲ ಮತ್ತು ಕನ್ನಡ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ, ಸೇವಕರು ಹುದ್ದೆಗಳ ನೇಮಕಾತಿ 2026

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ- ಗರಿಷ್ಠ 45 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 81,100 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಅರ್ಹತೆಯ ಆಧಾರದ ಮೇಲೆ ಬೆರಳಚ್ಚು ಪರೀಕ್ಷೆ ನಡೆಸಿ, ಬೆರಳಚ್ಚು ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ವಿವರಗಳುಗರಿಷ್ಠ ಅಂಕಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಪಡೆಯಬೇಕಾದ ಕನಿಷ್ಠ ಅಂಕಗಳು
ಬೆರಳಚ್ಚು ಪರೀಕ್ಷೆ10060
ಸಂದರ್ಶನ2010
ಒಟ್ಟು120 ಅಂಕಗಳು70 ಅಂಕಗಳು

ಉದ್ಯೋಗ ಮಾಹಿತಿ : ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ, ಜವಾನ, ಚಾಲಕ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.
ಹಂತ 1 : ಅರ್ಜಿ ಸಲ್ಲಿಸುವ ಮೊದಲು ಉಚ್ಛ ನ್ಯಾಯಾಲಯ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಉಚ್ಛ ನ್ಯಾಯಾಲಯದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಸಾಮಾನ್ಯ ಅಭ್ಯರ್ಥಿಗಳು – ರೂ. 350
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 350
• ಪ.ಜಾತಿ/ಪ.ಪಂ/ಪ್ರ.1/ಅಂಗವಿಕಲ ಅಭ್ಯರ್ಥಿಗಳು – ರೂ. 200

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆನ್‌ಲೈನ್‌ ಪಾವತಿ ಗೇಟ್ ವೇ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 30, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 28, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 28, 2026

Karnataka High Court Data Entry Assistant Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment