
Karnataka Forest Department KFD Recruitment 2026 : ಕರ್ನಾಟಕ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ.
Karnataka Forest Department KFD Recruitment 2026 : Details of Vacancies
ಹುದ್ದೆ :
ಅರಣ್ಯ ವೀಕ್ಷಕ (Forest Watcher)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 750 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಅಥವಾ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ಪಂಚಾಯತನಲ್ಲಿ ಹುದ್ದೆಗಳ ನೇಮಕಾತಿ 2026
ವಯೋಮಿತಿ :
ಕರ್ನಾಟಕ ಅರಣ್ಯ ಇಲಾಖೆಯ ಮಾನದಂಡಗಳ ಪ್ರಕಾರ ನಿಗದಿತ ವಯೋಮಿತಿ ಹೊಂದಿರಬೇಕು.
ವೇತನ :
ಕರ್ನಾಟಕ ಅರಣ್ಯ ಇಲಾಖೆಯ ಮಾನದಂಡಗಳ ಪ್ರಕಾರ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ದೈಹಿಕ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
ಕರ್ನಾಟಕ ಅರಣ್ಯ ಇಲಾಖೆಯ ಮಾನದಂಡಗಳ ಪ್ರಕಾರ ನಿಗದಿತ ಅರ್ಜಿ ಶುಲ್ಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 01, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 31, 2026
Karnataka Forest Department Recruitment 2026 : Important Links
| SHORT NOTIFICATION | CLICK HERE |
| APPLY ONLINE | CLICK HERE ಆಗಸ್ಟ್ 01 ರಿಂದ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.