
Belagavi DCC Bank Recruitment 2026 : ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಬೆಳಗಾವಿ ಇದರಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು, ಬಂದೂಕುಧಾರಿ, ಸಿಪಾಯಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Belagavi DCC Bank Recruitment 2026 : Details of Vacancies
ಹುದ್ದೆ :
ದ್ವಿತೀಯ ದರ್ಜೆ ಗುಮಾಸ್ತರು, ಬಂದೂಕುಧಾರಿ, ಸಿಪಾಯಿ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 104 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ದ್ವಿತೀಯ ದರ್ಜೆ ಗುಮಾಸ್ತರು | 83 |
| ಬಂದೂಕುಧಾರಿ | 1 |
| ಸಿಪಾಯಿ | 20 |
ಶೈಕ್ಷಣಿಕ ಅರ್ಹತೆ :
ದ್ವಿತೀಯ ದರ್ಜೆ ಗುಮಾಸ್ತರು –
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಎ/ ಬಿ.ಎಸ್ಸಿ/ ಬಿ.ಕಾಂ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಬಂದೂಕುಧಾರಿ –
ಎಸ್.ಎಸ್.ಎಲ್.ಸಿ/ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಭಾರತೀಯ ಸಶಸ್ತ್ರ ಪಡೆಗಳಿಂದ ನಿವೃತ್ತರಾದ ಮಾಜಿ ಸೈನಿಕರಾಗಿರತಕ್ಕದ್ದು ಮತ್ತು ಚಾಲ್ತಿಯಲ್ಲಿರುವ ಬಂದೂಕು ಪರವಾನಗಿ ಹೊಂದಿರತಕ್ಕದ್ದು.
ಸಿಪಾಯಿ –
ಎಸ್.ಎಸ್.ಎಲ್.ಸಿ/ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026
ವಯೋಮಾನ :
ದಿನಾಂಕ 27/08/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ವೇತನ :
| ಹುದ್ದೆ | ವೇತನ |
| ದ್ವಿತೀಯ ದರ್ಜೆ ಗುಮಾಸ್ತರು | ರೂ. 53,150 – ರೂ. 1,15,150 |
| ಬಂದೂಕುಧಾರಿ | ರೂ. 47,650 – ರೂ. 1,05,650 |
| ಸಿಪಾಯಿ | ರೂ. 42,650 – ರೂ. 96,650 |
ಆಯ್ಕೆ ವಿಧಾನ :
ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಲಿಖಿತ ಪರೀಕ್ಷಾ ಮಾದರಿ (ದ್ವಿತೀಯ ದರ್ಜೆ ಗುಮಾಸ್ತರು)
| ವಿಷಯ | ಅಂಕಗಳು |
| ಕನ್ನಡ ಭಾಷೆ | 50 |
| ಸಾಮಾನ್ಯ ಇಂಗ್ಲೀಷ್ | 25 |
| ಸಾಮಾನ್ಯ ಜ್ಞಾನ | 25 |
| ಸಹಕಾರ ವಿಷಯ | 50 |
| ಭಾರತದ ಸಂವಿಧಾನ | 25 |
| ಬ್ಯಾಂಕಿನ ಕಾರ್ಯ ಚಟುವಟಿಕೆಗಳು & ವಸ್ತುನಿಷ್ಠ ವಿಷಯಗಳು | 25 |
ಲಿಖಿತ ಪರೀಕ್ಷಾ ಮಾದರಿ (ಬಂದೂಕುಧಾರಿ, ಸಿಪಾಯಿ)
| ವಿಷಯ | ಅಂಕಗಳು |
| ಕನ್ನಡ ಭಾಷೆ | 50 |
| ಸಾಮಾನ್ಯ ಜ್ಞಾನ | 50 |
ಉದ್ಯೋಗ ಮಾಹಿತಿ : ಪಂಜಾಬ್ ನ್ಯಾಷನಲ್ ಬ್ಯಾಂಕ್ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಪ. ಜಾತಿ, ಪ. ಪಂಗಡದ, ಪ್ರ1, ಅಭ್ಯರ್ಥಿಗಳು – ರೂ. 500/-
• ಇತರೆ ವರ್ಗದ ಅಭ್ಯರ್ಥಿಗಳು – ರೂ. 1,000/-
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 27, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 27, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 27, 2026
DCC Bank Belagavi Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE ಜುಲೈ 27 ರಿಂದ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.