ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 – Uttara Kannada District Court Recruitment 2026

Uttara Kannada District Court Recruitment 2026

Uttara Kannada District Court Recruitment 2026 : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉತ್ತರ ಕನ್ನಡ, ಕಾರವಾರ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Uttara Kannada District Court Recruitment 2026 : Details of Vacancies

ಹುದ್ದೆ :

ಆದೇಶ ಜಾರಿಕಾರರು, ಜವಾನ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 78 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಆದೇಶ ಜಾರಿಕಾರರು13
ಜವಾನ65

ಶೈಕ್ಷಣಿಕ ವಿದ್ಯಾರ್ಹತೆ :

ಆದೇಶ ಜಾರಿಕಾರರು –

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಭಾರಿ/ ಹಗುರ ವಾಹನ ಚಾಲನಾ ಅನುಜ್ಞಾಪತ್ರ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಜವಾನ –

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಕಂದಾಯ ಇಲಾಖೆಯಿಂದ ವಿಲೇಜ್ ಅಕೌಂಟೆಂಟ್ ಹುದ್ದೆಗಳ ನೇಮಕಾತಿ 2026

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಪ.ಜಾತಿ, ಪ. ವರ್ಗ, ಪ್ರವರ್ಗ1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ :

ಹುದ್ದೆವೇತನ
ಆದೇಶ ಜಾರಿಕಾರರುರೂ. 31,775 – ರೂ. 61,300
ಜವಾನರೂ. 27,000 – ರೂ. 46,675

ಆಯ್ಕೆ ವಿಧಾನ :

ಆದೇಶ ಜಾರಿಕಾರರು –

ಅಭ್ಯರ್ಥಿಯು ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 25 ಅಭ್ಯರ್ಥಿಗಳಂತೆ (1:25 ರ ಅನುಪಾತದಲ್ಲಿ) ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಅಧಿಸೂಚಿಸಿರುವ ಹುದ್ದೆಗಳ ಮೀಸಲಾತಿಗನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗದಿಪಡಿಸಲಾಗಿದೆ.

ಜವಾನ –

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾ ಆಧಾರದ ಮೇಲೆ ಒಂದು ಹುದ್ದೆಗೆ 1:10 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 300
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು – ರೂ. 150
• ಪ.ಜಾತಿ, ಪ.ಪಂ, ಪ್ರವರ್ಗ 1, ಎದ್ದು ಕಾಣುವ ಅಂಗವೈಕಲ್ಯವುಳ್ಳ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 17, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 16, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 17, 2026

Uttara Kannada Court Recruitment 2026 : Important Links

NOTIFICATIONCLICK HERE
APPLY ONLINE CLICK HERE ಆಗಸ್ಟ್ 17 ರಿಂದ ಪ್ರಾರಂಭ
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment