ಭಾರತೀಯ ರೈಲ್ವೆಯಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ 2026 – RRB JE Recruitment 2026

RRB JE Recruitment 2026

RRB JE Recruitment 2026 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB JE Recruitment 2026 : Details of Vacancies

ಹುದ್ದೆ :

ಜ್ಯೂನಿಯರ್ ಇಂಜಿನಿಯರ್, ಡಿಪೊ ಮೆಟೀರಿಯಲ್ ಸುಪರಿಂಟೆಂಡೆಂಟ್, ಕೆಮಿಕಲ್ & ಮೆಟಲರ್ಜಿಕಲ್ ಅಸಿಸ್ಟಂಟ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 4029 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಜ್ಯೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್ ಡಿಪಾರ್ಟ್ಮೆಂಟ್) –

ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಅಥವಾ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೊಮಾ ಮುಗಿಸಿರಬೇಕು ಅಥವಾ ಈ ವಿಭಾಗಗಳಿಗೆ ಸಂಬಂಧಿಸಿದ ಯಾವುದೇ ಉಪ-ವಿಭಾಗಗಳ (sub-streams) ಸಂಯೋಜನೆಯಲ್ಲಿ 3 ವರ್ಷಗಳ ಡಿಪ್ಲೊಮಾ ಪಡೆದಿರಬೇಕು.

ಜ್ಯೂನಿಯರ್ ಇಂಜಿನಿಯರ್ (ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್) –

ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ 3 ವರ್ಷಗಳ ಡಿಪ್ಲೊಮಾ ಅಥವಾ 3 ವರ್ಷಗಳ ಬಿ.ಎಸ್ಸಿ (B.Sc. in Civil Engineering) ಪೂರ್ಣಗೊಳಿಸಿರಬೇಕು. ಅಥವಾ ಸಿವಿಲ್ ಎಂಜಿನಿಯರಿಂಗ್‌ನ ಮೂಲ ವಿಭಾಗಗಳಿಗೆ ಸಂಬಂಧಿಸಿದ ಯಾವುದೇ ಉಪ-ವಿಭಾಗಗಳು (Sub-streams) ಅಥವಾ ಸಂಯೋಜಿತ ಕೋರ್ಸ್‌ಗಳಲ್ಲಿ 3 ವರ್ಷಗಳ ಡಿಪ್ಲೊಮಾ/ಪದವಿ ಪಡೆದಿರಬೇಕು.

ಜ್ಯೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್ ಡಿಪಾರ್ಟ್ಮೆಂಟ್) –

ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಮ್ಯಾನುಫ್ಯಾಕ್ಚರಿಂಗ್, ಮೆಕಾಟ್ರಾನಿಕ್ಸ್, ಇಂಡಸ್ಟ್ರಿಯಲ್, ಮಷೀನಿಂಗ್, ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್, ಟೂಲ್ಸ್ ಮತ್ತು ಮಷೀನಿಂಗ್, ಟೂಲ್ಸ್ ಮತ್ತು ಡೈ ಮೇಕಿಂಗ್, ಆಟೋಮೊಬೈಲ್ ಅಥವಾ ಪ್ರೊಡಕ್ಷನ್ ಇಂಜಿನಿಯರಿಂಗ್ ವಿಭಾಗಗಳಲ್ಲಿ 3 ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಅಥವಾ ಈ ಮೇಲೆ ತಿಳಿಸಿದ ಯಾವುದೇ ಮೂಲ ಇಂಜಿನಿಯರಿಂಗ್ ವಿಭಾಗಗಳ ಉಪ-ವಿಭಾಗಗಳನ್ನು ಒಳಗೊಂಡ ಸಂಯೋಜಿತ ಕೋರ್ಸ್ ಮುಗಿಸಿ ತೇರ್ಗಡೆಯಾಗಿರಬೇಕು.

ಜ್ಯೂನಿಯರ್ ಇಂಜಿನಿಯರ್ (ಸಿಗ್ನಲ್ & ಟೆಲಿಕಮ್ಯುನಿಕೇಷನ್ ಡಿಪಾರ್ಟ್ಮೆಂಟ್) –

ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಇನ್ಫಾರ್ಮೇಶನ್ ಟೆಕ್ನಾಲಜಿ/ ಕಮ್ಯುನಿಕೇಶನ್ ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್ ವಿಭಾಗದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು ಅಥವಾ ಈ ಮೇಲೆ ತಿಳಿಸಿದ ಯಾವುದೇ ಮೂಲ ಇಂಜಿನಿಯರಿಂಗ್ ವಿಭಾಗಗಳ ಉಪ-ವಿಭಾಗಗಳನ್ನು (sub-streams) ಒಳಗೊಂಡ ಸಂಯೋಜಿತ ಕೋರ್ಸ್‌ ಮುಗಿಸಿರಬೇಕು.

ಡಿಪೊ ಮೆಟೀರಿಯಲ್ ಸುಪರಿಂಟೆಂಡೆಂಟ್ –

ಇಂಜಿನಿಯರಿಂಗ್‌ನ ಯಾವುದೇ ವಿಭಾಗದಲ್ಲಿ 3 ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಕೆಮಿಕಲ್ & ಮೆಟಲರ್ಜಿಕಲ್ ಅಸಿಸ್ಟಂಟ್ –

ಕನಿಷ್ಠ ಶೇಕಡ 45% ಅಂಕಗಳೊಂದಿಗೆ ಬಿ.ಎಸ್ಸಿ (ಭೌತಶಾಸ್ತ್ರ/ ರಸಾಯನಶಾಸ್ತ್ರ) ಪದವಿ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಿಂದ 15000 ಶಾಲಾ ಶಿಕ್ಷಕರ ನೇಮಕಾತಿ 2026

ವಯೋಮಾನ (ದಿನಾಂಕ 01/01/2027ಕ್ಕೆ) :

  • ಕನಿಷ್ಠ 18 ವರ್ಷ ಪೊರೈಸಿರಬೇಕು
  • ಗರಿಷ್ಠ 33 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ :

  • ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷ
  • ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
  • ಪಿಡಬ್ಲ್ಯೂಬಿಡಿ (ಯುಆರ್ & ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ
  • ಪಿಡಬ್ಲ್ಯೂಬಿಡಿ (ಒಬಿಸಿ-ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 13 ವರ್ಷ
  • ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

  • ಸ್ಟೇಜ್-1 ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT-1)
  • ಸ್ಟೇಜ್-2 ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT-2)
  • ಡಾಕ್ಯುಮೆಂಟ್ ವೆರಿಫಿಕೇಶನ್
  • ಮೆಡಿಕಲ್ ಎಕ್ಸಾಂಮಿನೇಶನ್

ಸ್ಟೇಜ್-1 ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT-1) –

SubjectNo. of Questions Marks for each SectionTime in Minutes
Mathemetics3030
General Intelligence & Reasoning 2525
General Awareness 1515
General Science 3030
Total10010090

ಸ್ಟೇಜ್-2 ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT-2) –

SubjectNo. of Questions Marks for each SectionTime in Minutes
General Awareness 1515
Physics & Chemistry 1515
Basics of Computers and Applications 1010
Basics of Environment and pollution control 1010
Technical Abilities 100100
Total150100120

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಪಿಡಬ್ಲ್ಯೂಬಿಡಿ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
  • ಉಳಿದ ಅಭ್ಯರ್ಥಿಗಳಿಗೆ – ರೂ. 500

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

  • ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 14, 2026
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 13, 2026
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 15, 2026

RRB JE Recruitment 2026 : Important Links

CORRIGENDUMCLICK HERE
NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment