ಈಸ್ಟ್ ಕೋಸ್ಟ್ ರೈಲ್ವೆ ನೇಮಕಾತಿ 2026 – East Coast Railway Recruitment 2026

East Coast Railway Recruitment 2026

East Coast Railway Recruitment 2026 : ಈಸ್ಟ್ ಕೋಸ್ಟ್ ರೈಲ್ವೆಯಲ್ಲಿ ಅಗತ್ಯ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

East Coast Railway Recruitment 2026 : Details of Vacancies

ಹುದ್ದೆ :

ಅಪ್ರೆಂಟಿಸ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 1599 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಕೋರ್ಸ್ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಾನ (15/09/2026ಕ್ಕೆ) :

  • ಕನಿಷ್ಠ 15 ವರ್ಷ ಪೂರೈಸಿರಬೇಕು
  • ಗರಿಷ್ಠ 24 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ 2026

ವಯೋಮಿತಿ ಸಡಿಲಿಕೆ :

  • ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ :

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಇತರೆ ಮಾಹಿತಿ :

ಈಸ್ಟ್ ಕೋಸ್ಟ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್, ಪೇಂಟರ್, ಮೆಕ್ಯಾನಿಕ್ (ಡೀಸೆಲ್) (ಟಿ.ಎಂ.ಒ.), ಸೆಕ್ರೆಟೇರಿಯಲ್ ಅಸಿಸ್ಟೆಂಟ್ (ಸ್ಟೆನೋಗ್ರಫಿ), ಬ್ಲಾಕ್ ಸ್ಮಿತ್, ಡ್ರಿಲ್ಲರ್, ಬ್ರಿಡ್ಜ್ ಇರೆಕ್ಟರ್, ಶೀಟ್ ಮೆಟಲ್ ವರ್ಕರ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ / ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (ಟಿ.ಎಂ.ಒ.), ವೈರ್‌ಮ್ಯಾನ್ / ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ ರೆಫ್ರಿಜರೇಷನ್ ಮತ್ತು ಎಸಿ, ಪ್ಲಂಬರ್, ಡ್ರಾಫ್ಟ್ಸ್‌ಮನ್ (ಸಿವಿಲ್), ಮೆಕ್ಯಾನಿಕ್ (ಮೋಟಾರ್ ವೆಹಿಕಲ್), ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಲ್ಯಾಬೊರೇಟರಿ ಟೆಕ್ನಿಷಿಯನ್ (ಪ್ಯಾಥಾಲಜಿ), ಸಾರಂಗ್, ಗ್ರೈಂಡರ್, ಮೇಸನ್, ಡ್ರಾಫ್ಟ್ಸ್‌ಮನ್ (ಮೆಕ್ಯಾನಿಕಲ್) ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
  • ಉಳಿದ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

  • ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 26, 2026
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 15, 2026

East Coast Railway Recruitment 2026 : Important Links

NOTIFICATIONCLICK HERE
APPLY ONLINE CLICK HERE ಆಗಸ್ಟ್ 26 ರಿಂದ ಪ್ರಾರಂಭ
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment