
Raichur Gram Panchayat Recruitment 2026 : ರಾಯಚೂರು ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Raichur Gram Panchayat Recruitment 2026 : Details of Vacancies
ಹುದ್ದೆ :
ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 65 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಕರವಸೂಲಿಗಾರ | 31 |
| ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ | 34 |
ಶೈಕ್ಷಣಿಕ ಅರ್ಹತೆ :
- ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
- ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಉದ್ಯೋಗ ಮಾಹಿತಿ : ಬ್ಯಾಂಕ್ ಆಫ್ ಬರೋಡ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿ 2026
ವಯೋಮಾನ (ದಿನಾಂಕ 03/09/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
- 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
- ಪ.ಜಾತಿ/ಪ.ಪಂ/ಹಿಂ.ವರ್ಗ1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ಆಯ್ಕೆ ವಿಧಾನ :
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ರೂ. 500
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
- ಪ.ಜಾತಿ, ಪ.ಪಂಗಡ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 200
- ವಿಶೇಷ ಚೇತನ ಅಭ್ಯರ್ಥಿಗಳು – ರೂ. 100
ಶುಲ್ಕ ಪಾವತಿಸುವ ವಿಧಾನ :
ಗ್ರಾಮಪಂಚಾಯತಿಯಲ್ಲಿನ/ ಯಾವುದೇ ಎಸ್.ಬಿ.ಐ ಶಾಖೆಗೆ ಭೇಟಿ ನೀಡಿ ಶುಲ್ಕ ಪಾವತಿಸಬಹುದು.

ಇತರೆ ಮಾಹಿತಿ :
ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸದರಿ ಗ್ರಾಮ ಪಂಚಾಯಿತಿಯ ಗ್ರಾಮಗಳಲ್ಲಿ ವಾಸ ಮಾಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
- ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 20, 2026
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 03, 2026
Raichur Gram Panchayat Recruitment 2026 : Important Links
| NOTIFICATION (BILL COLLECTOR) | CLICK HERE |
| NOTIFICATION (DEO) | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.