ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2026 – Shivamogga Gram Panchayat Recruitment 2026

Shivamogga Gram Panchayat Recruitment 2026

Shivamogga Gram Panchayat Recruitment 2026 : ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರ ಹಾಗೂ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shivamogga Gram Panchayat Recruitment 2026 : Details of Vacancies

ಹುದ್ದೆ :

ಕರವಸೂಲಿಗಾರ (ಬಿಲ್ ಕಲೆಕ್ಟರ್), ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 52 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕರವಸೂಲಿಗಾರ (ಬಿಲ್ ಕಲೆಕ್ಟರ್)21
ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್31

ಶೈಕ್ಷಣಿಕ ಅರ್ಹತೆ :

  • ಕನ್ನಡವನ್ನು ಒಂದು ಭಾಷೆಯನ್ನಾಗಿ ಅಭ್ಯಸಿಸಿ ದ್ವಿತೀಯ ಪಿ.ಯು.ಸಿಯಲ್ಲಿ ತೇರ್ಗಡೆ ಹೊಂದಿರಬೇಕು.
  • ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಕರವಸೂಲಿಗಾರ ಹುದ್ದೆಗೆ 3 ತಿಂಗಳು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ 6 ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಉದ್ಯೋಗ ಮಾಹಿತಿ : ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿಗಾರ ಹಾಗೂ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026

ವಯೋಮಾನ (ದಿನಾಂಕ 25/09/2026ಕ್ಕೆ)

  • ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
  • 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
  • ಪ.ಜಾತಿ/ಪ.ಪಂ/ಪ್ರವರ್ಗ1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ಆಯ್ಕೆ ವಿಧಾನ :

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ 50% ರಷ್ಟು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನಡೆಸಿ ಆ ಅರ್ಹತಾ ಪರೀಕ್ಷೆಯಲ್ಲಿ ಪಡೆದ 50% ಅಂಕಗಳನ್ನು ಒಳಗೊಂಡಿರುವ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ :

ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :

  • ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳು – ರೂ. 50
  • ಇತರೆ ಅಭ್ಯರ್ಥಿಗಳು – ರೂ. 100

ಶುಲ್ಕ ಪಾವತಿಸುವ ವಿಧಾನ :

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಶಿವಮೊಗ್ಗರವರ ಹೆಸರಿಗೆ ಡಿ.ಡಿಯನ್ನು ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.

ಇತರೆ ಮಾಹಿತಿ :

ಹುದ್ದೆಗಳು ಯಾವ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇದೆಯೋ ಆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

  • ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 27, 2026
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 25, 2026
  • ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : ಸೆಪ್ಟೆಂಬರ್ 25, 2026

Shivamogga Gram Panchayat Recruitment 2026 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment