
Shri Shiddeshwar Cooperative Bank Vijayapur Recruitment 2026 : ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇದರಲ್ಲಿ ಖಾಲಿ ಇರುವ ಕಿರಿಯ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Shri Shiddeshwar Cooperative Bank Vijayapur Recruitment 2026 : Details of Vacancies
ಹುದ್ದೆ :
ಕಿರಿಯ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು, ನಾಯಕ/ಅಟೆಂಡರ್, ವಾಹನ ಚಾಲಕ, ಸಿಪಾಯಿ, ರಾತ್ರಿ ಕಾವಲುಗಾರ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ವಿಜಯಪುರ ಜಿಲ್ಲೆ , ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 60 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಕಿರಿಯ ವ್ಯವಸ್ಥಾಪಕರು | 06 |
| ಹಿರಿಯ ಸಹಾಯಕರು | 10 |
| ಕಿರಿಯ ಸಹಾಯಕರು | 15 |
| ನಾಯಕ/ಅಟೆಂಡರ್ | 03 |
| ವಾಹನ ಚಾಲಕ | 01 |
| ಸಿಪಾಯಿ | 19 |
| ರಾತ್ರಿ ಕಾವಲುಗಾರ | 06 |
ಶೈಕ್ಷಣಿಕ ಅರ್ಹತೆ :
ಕಿರಿಯ ವ್ಯವಸ್ಥಾಪಕರು –
ಪದವಿ ಜೊತೆಗೆ ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ 3 ವರ್ಷ ಹಣಕಾಸು ಸಂಸ್ಥೆಯಲ್ಲಿ (ಬ್ಯಾಂಕಿಂಗ್ ವಿಭಾಗದಲ್ಲಿ) ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.
ಹಿರಿಯ, ಕಿರಿಯ ಸಹಾಯಕರು –
ಪದವಿ ಜೊತೆಗೆ ಕಂಪ್ಯೂಟರ್ ಪರಿಜ್ಞಾನ ಹೊಂದಿರಬೇಕು.
ನಾಯಕ/ಅಟೆಂಡರ್ –
ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
ವಾಹನ ಚಾಲಕ –
ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು ಜೊತೆಗೆ ವಾಹನ ಚಾಲನೆಯ ಚಾಲ್ತಿ (LMV) ಲೈಸೆನ್ಸ್ ಹೊಂದಿರಬೇಕು.
ಸಿಪಾಯಿ, ರಾತ್ರಿ ಕಾವಲುಗಾರ :
ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ನೇಮಕಾತಿ 2026
ವಯೋಮಾನ (ದಿನಾಂಕ 15/09/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
- ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ :
| ಹುದ್ದೆ | ವೇತನ |
| ಕಿರಿಯ ವ್ಯವಸ್ಥಾಪಕರು | ರೂ. 22,800 – ರೂ. 43,200 |
| ಹಿರಿಯ ಸಹಾಯಕರು | ರೂ. 21,600 – ರೂ. 40,050 |
| ಕಿರಿಯ ಸಹಾಯಕರು | ರೂ. 20,000 – ರೂ. 36,300 |
| ನಾಯಕ/ಅಟೆಂಡರ್ | ರೂ. 14,550 – ರೂ. 26,700 |
| ವಾಹನ ಚಾಲಕ | ರೂ. 14,550 – ರೂ. 26,700 |
| ಸಿಪಾಯಿ | ರೂ. 14,550 – ರೂ. 26,700 |
| ರಾತ್ರಿ ಕಾವಲುಗಾರ | ರೂ. 14,550 – ರೂ. 26,700 |
ಆಯ್ಕೆ ವಿಧಾನ :
- ಕಿರಿಯ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ.85ಕ್ಕೆ ಇಳಿಸಿ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
- ನಾಯಕ/ಅಟೆಂಡರ್, ವಾಹನ ಚಾಲಕ, ಸಿಪಾಯಿ, ರಾತ್ರಿ ಕಾವಲುಗಾರ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಬೋರ್ಡನ ಫಲಿತಾಂಶದ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಲಿಖಿತ ಪರೀಕ್ಷಾ ಮಾದರಿ –
| ವಿಷಯ | ಅಂಕಗಳು |
| ಕನ್ನಡ ಭಾಷೆ | 50 |
| ಇಂಗ್ಲೀಷ್ ಭಾಷೆ | 25 |
| ಸಾಮಾನ್ಯ ಜ್ಞಾನ | 25 |
| ಸಹಕಾರ | 50 |
| ಬ್ಯಾಂಕಿಂಗ್ | 25 |
| ಭಾರತದ ಸಂವಿಧಾನ | 25 |
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿಗಾರ ಹಾಗೂ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ, ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ – ರೂ. 1200
- ಪ.ಜಾತಿ, ಪ. ಪಂ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ. 600
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 26, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 15, 2026
SS Bank Vijayapur Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.