
Mysore Mahanagara Palike Recruitment 2026 : ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಯುಜಿಡಿ ಹೆಲ್ಫರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Mysore Mahanagara Palike Recruitment 2026 : Details of Vacancies
ಹುದ್ದೆ :
ಯುಜಿಡಿ ಹೆಲ್ಫರ್ಸ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 116 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು :
- ಕನ್ನಡ ಮಾತನಾಡಲು ಬಲ್ಲವರಾಗಿರಬೇಕು.
- ಮಹಾನಗರ ಪಾಲಿಕೆಯಲ್ಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ಸಮಾನ ಕೆಲಸಕ್ಕೆ ಸಮಾನ ವೇತನ/ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆಯಡಿಯಲ್ಲಿ (ಎಸ್.ಟಿ.ಪಿ/ ವೆಟ್ ವೆಲ್ ಕಾರ್ಯನಿರ್ವಹಿಸುತ್ತಿರುವವರನ್ನು ಹೊರತುಪಡಿಸಿ) ನೇಮಕಾತಿ ಹೊಂದಿ ಕನಿಷ್ಠ 02 ವರ್ಷ ಸೇವೆ ಸಲ್ಲಿಸಿರಬೇಕು.
ಉದ್ಯೋಗ ಮಾಹಿತಿ : ಕ್ಲರ್ಕ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026
ವಯೋಮಿತಿ (08/09/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು
- ಗರಿಷ್ಠ 55 ವರ್ಷ ಮೀರಿರಬಾರದು
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 46,675 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೈಸೂರು ಮಹಾನಗರ ಪಾಲಿಕೆಯ ಕೇಂದ್ರ ಕಛೇರಿಯಿಂದ ನಿಗದಿತ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಅಧ್ಯಕ್ಷರು, ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ಆಯುಕ್ತರು ಮೈಸೂರು ಮಹಾನಗರ ಪಾಲಿಕೆ, ಮೈಸೂರು
ಅರ್ಜಿ ನಮೂನೆ ಪಡೆಯುವ ವಿಳಾಸ :
ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ, ಸಯ್ಯಾಜಿರಾವ್ ರಸ್ತೆ, ಮೈಸೂರು – 570004
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 10, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 09, 2026
Mysore Mahanagara Palike Recruitment 2026 : Important Links
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.